ಮಡಿಕೇರಿ, ಆ. 24: ಕೇಂದ್ರ ಸಾಂಖ್ಯಿಕ ಮತ್ತು ಯೋಜನಾ ಖಾತೆ ಸಚಿವ, ಕೊಡಗಿನ ಅಳಿಯ ಡಿ.ವಿ. ಸದಾನಂದ ಗೌಡ ಅವರು ಕೊಡಗಿನ ಜನರ ಸಂಕಷ್ಟಕ್ಕೆ ಸ್ಪಂದಿಸಿದ್ದಾರೆ.ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರಕ್ಕೆ ತನಗೆ ಭಾರತ ಸರ್ಕಾರ ನೀಡುವ ಸಂಸದರ ನಿಧಿಯಿಂದ 2014-2019ರವರೆಗಿನ ಬಾಕಿ ಇರುವ ಅನುದಾನದಿಂದ ಇತ್ತೀಚೆಗೆ ಕೊಡಗು ಜಿಲ್ಲೆಯಲ್ಲಿ ಉಂಟಾದ ಪ್ರಕೃತಿ ವಿಕೋಪದ ಅತಿ ಪ್ರವಾಹ ಪರಿಸ್ಥಿತಿಯಿಂದ ಹಾನಿಗೊಳಗಾದ ನೆರೆ ಸಂತ್ರಸ್ತರಿಗೆ ಮನೆ ನಿರ್ಮಾಣ ಮತ್ತು ರಸ್ತೆ ಕಾಮಗಾರಿ ರೂ. 20 ಲಕ್ಷಗಳ ಅನುದಾನವನ್ನು ಕೊಡಗು ಜಿಲ್ಲಾಧಿಕಾರಿಗಳಿಗೆ ಬಿಡುಗಡೆ ಮಾಡಿ ಕಾಮಗಾರಿಯನ್ನು ಕೈಗೆತ್ತಿಕೊಂಡು ಪೂರ್ಣಗೊಳಿಸುವಂತೆ ಅವರು ಪತ್ರ ಮುಖೇನ ಜಿಲ್ಲಾಧಿಕಾರಿಗಳಿಗೆ ಕೋರಿದ್ದಾರೆ.