ಮಡಿಕೇರಿ, ಆ. 24: ಹೊಳೆನರಸೀಪುರ ಪ್ರಥಮ ದರ್ಜೆ ಕಾಲೇಜಿನ ಅರ್ಥಶಾಸ್ತ್ರ ಪ್ರಾಧ್ಯಾಪಕ ಡಾ. ಭುವನೇಂದ್ರ ಅವರು ಅಭ್ಯುದಯ ಅರ್ಥಶಾಸ್ತ್ರಕ್ಕೆ ಸಂಬಂಧಿಸಿದ ಅಧ್ಯಯನ ಪ್ರಬಂಧಗಳ ಕೊಡುಗೆ ಪರಿಗಣಿಸಿ ಭಾರತ ರತ್ನ ಡಾ. ಎ.ಪಿ.ಜೆ. ಅಬ್ದುಲ್ ಕಲಾಂ ಚಿನ್ನದ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.
ಭುವನೇಂದ್ರ ಅವರು ಮೈಸೂರು ವಿಶ್ವವಿದ್ಯಾನಿಲಯದಿಂದ ಅರ್ಥಶಾಸ್ತ್ರದಲ್ಲಿ ಡಾಕ್ಟರೇಟ್ ಪದವಿ ಪಡೆದಿದ್ದಾರೆ. ಅವರು ಮೈಸೂರಿನ ಮಾನಸ ಗಂಗೋತ್ರಿಯಲ್ಲಿ ಮೊದಲ ರ್ಯಾಂಕ್‍ನೊಂದಿಗೆ ಅರ್ಥಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿ ಗಳಿಸಿದ್ದಾರೆ.
ಭುವನೇಂದ್ರ ಅವರು ಮೂಲತಃ ಕೊಡಗು ಜಿಲ್ಲೆಯ ಶನಿವಾರಸಂತೆ ಬಳಿ ಶಿರಂಗಾಲ ಗ್ರಾಮದ ಕೋಮಾರಪ್ಪ ನಾಗಮ್ಮ ದಂಪತಿಯ ಪುತ್ರರಾಗಿದ್ದಾರೆ. ಇವರಿಗೆ ತಮಿಳುನಾಡಿನ ಜಾಗತಿಕ ಆರ್ಥಿಕ ಅಭಿವೃದ್ಧಿ ಮತ್ತು ಅಧ್ಯಯನ ಸಂಸ್ಥೆ ಈ ಪ್ರಶಸ್ತಿ ನೀಡಿ ಗೌರವಿಸಿದೆ.