ಕುಶಾಲನಗರ, ಆ. 24: ಕೇಂದ್ರ ರಕ್ಷಣಾ ಸಚಿವರಾದ ನಿರ್ಮಲ ಸೀತಾರಾಮನ್ ವಾಯುದಳದ ಹೆಲಿಕಾಪ್ಟರ್ ಮೂಲಕ ಹಾರಂಗಿ ಹೆಲಿಪ್ಯಾಡ್‍ಗೆ ಬಂದಿಳಿದರು. ಈ ಸಂದರ್ಭ ಜಿಲ್ಲಾಧಿಕಾರಿ ಪಿ.ಐ. ಶ್ರೀವಿದ್ಯಾ, ಪೊಲೀಸ್ ವರಿಷ್ಠಾಧಿಕಾರಿ ಡಾ.ಸುಮನ, ಸಂಸತ್ ಸದಸ್ಯ ಪ್ರತಾಪ್ ಸಿಂಹ, ಶಾಸಕ ಅಪ್ಪಚ್ಚುರಂಜನ್, ಹಿರಿಯ ಅಧಿಕಾರಿಗಳು ಬರಮಾಡಿಕೊಂಡರು.