ಕೂಡಿಗೆ, ಆ. 25 : ಸಮೀಪದ ಕೂಡುಮಂಗಳೂರು ಗ್ರಾ.ಪಂ.್ತ ವ್ಯಾಪ್ತಿಯ ಕೂಡುಮಂಗಳೂರು ಗ್ರಾಮದಲ್ಲಿರುವ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷರಾಗಿ ಹಾಸನ ಹಾಲು ಒಕ್ಕೂಟದ ಕೊಡಗು ಜಿಲ್ಲಾ ನಿರ್ದೇಶಕರಾಗಿರುವ ಕೆ.ಟಿ. ಅರುಣ್ ಕುಮಾರ್ ಅವರು ಆಯ್ಕೆಗೊಂಡಿದ್ದಾರೆ. ಉಪಾಧ್ಯಕ್ಷರಾಗಿ ಎಸ್.ಹೆಚ್.ಹರೀಶ್ ಆಯ್ಕೆ ಆಗಿದ್ದಾರೆ. ಶನಿವಾರ ನಡೆದ ಈ ಚುನಾವಣೆ ಪ್ರಕ್ರಿಯೆಯಲ್ಲಿ ಕೆ.ಟಿ. ಅರುಣ್‍ಕುಮಾರ್ ಅವರು ಅವಿರೋಧವಾಗಿ ಆಯ್ಕೆಗೊಂಡರು.