*ಸಿದ್ದಾಪುರ, ಆ. 25: ಕೊಡಗಿನ ವಿವಿಧೆಡೆ ಪ್ರಕೃತಿ ವಿಕೋಪಕ್ಕೆ ಸಿಲುಕಿ ಸಂತ್ರಸ್ತರಾದ 100 ಮಂದಿಗೆ ಆಹಾರ ಮತ್ತು ಇತರೆ ದೈನಂದಿನ ಸೌಕರ್ಯಗಳ ವ್ಯವಸ್ಥೆಯೊಂದಿಗೆ ಚೆಟ್ಟಳ್ಳಿಯ ನರೇಂದ್ರ ಮೋದಿ ಸಮುದಾಯ ಭವನದಲ್ಲಿ ತಂಗಲು ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ಚೆಟ್ಟಳ್ಳಿ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಹಾಗೂ ಜನಪರ ಹೋರಾಟಗಾರ ಬಲ್ಲಾರಂಡ ಮಣಿ ಉತ್ತಪ್ಪ ತಿಳಿಸಿದ್ದಾರೆ. ಸಂಪರ್ಕಿಸುವವರು 8277131512 ಹಾಗೂ ಗ್ರಾಮ ಪಂಚಾಯಿತಿ ಸದಸ್ಯ ಬಲ್ಲಾರಂಡ ಕಂಠಿ ಕಾರ್ಯಪ್ಪ- 9449988812 ಇವರುಗಳ ಮೊಬೈಲ್ ಸಂಖ್ಯೆಯನ್ನು ಸಂಪರ್ಕಿಸಲು ಕೋರಲಾಗಿದೆ.