ಸುಂಟಿಕೊಪ್ಪ, ಆ.26: ಮಹಾತ್ಮಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಯಡಿಯಲ್ಲಿ ವಿವಿಧ ಕೂಲಿ ಕೆಲಸಗಳಿದ್ದು ಕಾರ್ಮಿಕರು ಗ್ರಾಮ ಪಂಚಾಯಿತಿಯಲ್ಲಿ ಹೆಸರನ್ನು ನೊಂದಾಯಿಸಿಕೊಳ್ಳುವಂತೆ ಪಂಚಾಯಿತಿ ಆಡಳಿತ ಮಂಡಳಿ ತಿಳಿಸಿದೆ.

ಸುಂಟಿಕೊಪ್ಪ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಯಡಿಯಲ್ಲಿ ಕೂಲಿ ಕೆಲಸಗಳನ್ನು ನೀಡಲಾಗುವದು ಅದುದರಿಂದ ಇದುವರೆಗೂ ಉದ್ಯೋಗ ಖಾತ್ರಿ ಯೋಜನೆಗೆ ಹೆಸರು ನೋಂದಾಯಿಸಿಕೊಳ್ಳದೆ ಇದೀಗ ಕೆಲಸ ಬಯಸುವ ಕಾರ್ಮಿಕರು, ಕೂಡಲೇ ಪಂಚಾಯಿತಿ ಕಚೇರಿಯಲ್ಲಿ ಹೆಸರನ್ನು ನೋಂದಾಯಿಸಿಕೊಳ್ಳುವಂತೆ ಪಂಚಾಯಿತಿ ಅಧ್ಯಕ್ಷೆ, ಸದಸ್ಯರುಗಳು ಹಾಗೂ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.