ಕರಿಕೆ, ಆ. 27: ಇಲ್ಲಿಗೆ ಸಮೀಪದ ಚೆತ್ತುಕಾಯ ಕುಂಡತ್ತಿಕಾನದ ಕಳ್ಳಾರ್ ಕೇಶವ ನಾಯ್ಕ ಎಂಬವರ ಮನೆ ಹಿಂಭಾಗ ಮಣ್ಣಿನಡಿಯಿಂದ ಶಬ್ಧ ಹೊರಹೊಮ್ಮುತ್ತಿದ್ದು, ಗ್ರಾಮಸ್ಥರು ಆತಂಕಗೊಂಡಿದ್ದಾರೆ. ಸ್ಥಳಕ್ಕೆ ಕರಿಕೆ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿ ಸುತ್ತಮುತ್ತಲಿನ ಪ್ರದೇಶದಲ್ಲಿ ವಾಸ ಮಾಡುವ ಜನರನ್ನು ಸುರಕ್ಷಿತ ಸ್ಥಳಕ್ಕೆ ತೆರಳುವಂತೆ ಸೂಚನೆ ನೀಡಿದ್ದಾರೆ.
ಸ್ಥಳಕ್ಕೆ ಗ್ರಾಮ ಪಂಚಾಯತಿ ಅಧ್ಯಕ್ಷ ಬಾಲಚಂದ್ರ ನಾಯರ್, ಅಭಿವೃದ್ಧಿ ಅಧಿಕಾರಿ ಬಿಪಿನ್, ಜಿ.ಪಂ. ಸದಸ್ಯೆ ಕವಿತಾ ಪ್ರಭಾಕರ, ಭಾಗಮಂಡಲ ಠಾಣಾಧಿಕಾರಿ ವೆಂಕಟರಮಣ ಭೇಟಿ ನೀಡಿ ಪರಿಶೀಲನೆ ನಡೆಸಿದರು.