ಮಡಿಕೇರಿ, ಆ. 27: ಕೃಷಿ ಸಚಿವ ಎನ್.ಎಚ್.ಶಿವಶಂಕರ ರೆಡ್ಡಿ ಅವರು ತಾ. 28 ರಂದು (ಇಂದು) ಬೆಳಗ್ಗೆ 10.30 ಗಂಟೆಗೆ ಜಿಲ್ಲೆಯಲ್ಲಿ ತೀವ್ರ ಮಳೆ ಹಾಗೂ ಭೂ ಕುಸಿತದಿಂದ ಬೆಳೆ ಹಾನಿಗೆ ಒಳಗಾಗಿರುವ ಪ್ರದೇಶಗಳಿಗೆ ಭೇಟಿ ನೀಡಲಿದ್ದಾರೆ.

ಮಧ್ಯಾಹ್ನ 3 ಗಂಟೆಗೆ ಮೈತ್ರಿ ಸೇರಿದಂತೆ ಪರಿಹಾರ ಕೇಂದ್ರಗಳಿಗೆ ಭೇಟಿ ನೀಡಲಿದ್ದಾರೆ.

ಜೊತೆಗೆ ಸಂತ್ರಸ್ತ ರೈತರೊಂದಿಗೆ ಸಂವಾದ ನಡೆಸಲಿದ್ದಾರೆ. 4.30 ಗಂಟೆಗೆ ಜಿಲ್ಲಾಧಿಕಾರಿ ಅವರ ಕಚೇರಿಗೆ ಆಗಮಿಸಿ ಜಿಲ್ಲಾಧಿಕಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯವರು, ಜಿಲ್ಲಾ ಪಂಚಾಯಿತಿ ಸಿಇಒ ಹಾಗೂ ಕೃಷಿ ಇಲಾಖೆ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಲಿದ್ದಾರೆ. ಸಂಜೆ 5 ಗಂಟೆಗೆ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ಸುದ್ದಿಗೋಷ್ಠಿ ನಡೆಸಲಿದ್ದಾರೆ ಎಂದು ಸಚಿವರ ಆಪ್ತ ಕಾರ್ಯದರ್ಶಿ ತಿಳಿಸಿದ್ದಾರೆ.