ಮಡಿಕೇರಿ ಆ. 27 : ಕೊಡಗಿನಲ್ಲಿ ಪ್ರಕೃತಿ ವಿಕೋಪದಿಂದ ಮನೆ ಕಳೆದುಕೊಂಡ ನಿರಾಶ್ರಿತರಿಗೆ ಮನೆ ನಿರ್ಮಿಸಿಕೊಡಲು ಸರಕಾರ ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು ಬೆಂಗಳೂರು ಮಾನವ ಹಕ್ಕುಗಳ ಜನಜಾಗೃತಿ ಸಮಿತಿ ಒತ್ತಾಯಿಸಿದೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಮಿತಿಯ ರಾಜ್ಯಾಧ್ಯಕ್ಷ ನಾಗರಾಜು, ಕೊಡಗಿನಲ್ಲಿ ಉಂಟಾದ ಪ್ರಕೃತಿ ವಿಕೋಪದಿಂದ ಹಲವು ಮಂದಿ ಮನೆ ಕಳೆದುಕೊಂಡು ನಿರಾಶ್ರಿತ ಕೇಂದ್ರದಲ್ಲಿ ತಂಗಿದ್ದಾರೆ. ಇವರೆಲ್ಲರಿಗೂ ಸರಕಾರ ಆದಷ್ಟು ಶೀಘ್ರದಲ್ಲಿಯೇ ಸೂರು ಕಲ್ಪಿಸಿಕೊಡಬೇಕು ಎಂದು ಒತ್ತಾಯಿಸಿದರು.

ಸಲಹಾ ಸಮಿತಿಯ ಪದಾಧಿಕಾರಿ ಶಶಿಕುಮಾರ್ ಮಾತನಾಡಿ, ನಿರಾಶ್ರಿತÀರಿಗೆ ಶಿಕ್ಷಣ, ವಸತಿ ಸೇರಿದಂತೆ ಮೂಲಭೂತ ಸೌಲಭ್ಯ ನೀಡಲು ಸರಕಾರದ ನಿಯಮವಿದ್ದು, ಸಮಸ್ಯೆಗಳನ್ನು ಬಗೆಹರಿಸಲು ಜಿಲ್ಲಾಡಳಿತ ಸಕಾಲದಲ್ಲಿ ಕ್ರಮ ಕೈಗೊಳ್ಳಬೇಕೆಂದರು.

ಕಲಾವಿದೆ ಮಾಲತಿಶ್ರೀ ಮಾತನಾಡಿ, ನಿರಾಶ್ರಿತರ ಸಂಕಷ್ಟವನ್ನು ಅಕ್ಷರ ರೂಪದಲ್ಲಿ ಹೇಳಲು ಸಾಧ್ಯವಿಲ್ಲ. ಹಾಗಾಗಿ ಅವರಿಗೆ ಮೂಲಭೂತ ಸೌಲಭ್ಯ ಒದಗಿಸುವ ನಿಟ್ಟಿನಲ್ಲಿ ಸರಕಾರ ಕಾರ್ಯೋನ್ಮುಖವಾಗಬೇಕು ಎಂದರು.

ಸುದ್ದಿಗೋಷ್ಠಿಯಲ್ಲಿ ರಾಜ್ಯ ಮಹಿಳಾ ಘಟಕದ ಉಪಾಧ್ಯಕ್ಷೆ ಜಯಮಾಲ ಉಪಸ್ಥಿತರಿದ್ದರು.