ವೀರಾಜಪೇಟೆ, ಆ. 27: ವೀರಾಜಪೇಟೆ ತಾಲೂಕಿನಲ್ಲಿ ಕಳೆದ ಎರಡೂವರೆ ತಿಂಗಳುಗಳಿಂದ ಭಾರೀ ಮಳೆಯಾಗಿ ಎಲ್ಲಾ ಬೆಳೆಗಳು ಹಾನಿಗೊಳಗಾಗಿದ್ದು ಇದರ ಅಂದಾಜು ವೆಚ್ಚವನ್ನು ಸಿದ್ಧಪಡಿಸಲು ಇಲ್ಲಿನ ಕಾಫಿ ಮಂಡಳಿ, ತೋಟಗಾರಿಕೆ, ಕೃಷಿ ಇಲಾಖೆ ಅಧಿಕಾರಿಗಳು ತಾಲೂಕಿನಾದ್ಯಂತ ಸಮೀಕ್ಷೆ ಆರಂಭಿಸಿದ್ದಾರೆ. ಇಂದಿನಿಂದ ತಾಲೂಕಿನಾದ್ಯಂತ ಪ್ರವಾಸ ಕೈಗೊಂಡಿರುವ ಅಧಿಕಾರಿಗಳ ತಂಡ ಮಳೆಯಿಂದ ಹಾನಿಗೊಳಗಾದ ಪ್ರದೇಶಕ್ಕೆ ಖುದ್ದು ಭೇಟಿ ನೀಡಲಿದ್ದಾರೆ. ಸಮೀಕ್ಷೆಯ ನಂತರ ಕೊಡಗು ಜಿಲ್ಲಾಧಿಕಾರಿ ಮೂಲಕ ಸರಕಾರಕ್ಕೆ ಅಂದಾಜು ನಷ್ಟದ ಪ್ರಮಾಣದ ವರದಿ ಸಲ್ಲಿಸಲಿದ್ದಾರೆ.