ಪೊನ್ನಂಪೇಟೆ, ಸೆ. 7: ಕೇಂದ್ರ ಮೀಸಲು ಪೊಲೀಸ್ ಪಡೆಯ (ಸಿ.ಆರ್.ಪಿ.ಎಫ್.) ಡೆಪ್ಯೂಟಿ ಕಮಾಂಡೆಂಟ್ ಆಗಿ ಪದೋನ್ನತಿ ಪಡೆದಿರುವ ಕೂತಂಬಟ್ಟಿತ ಎಂ. ಹುಸೈನಾರ್ ಅವರನ್ನು ಕೊಡವ ಮುಸ್ಲಿಂ ಅಸೋಸಿಯೇಷನ್ (ಕೆ.ಎಂ.ಎ.) ವತಿಯಿಂದ ಸನ್ಮಾನಿಸಿ, ಗೌರವಿಸಲಾಯಿತು.

ವೀರಾಜಪೇಟೆಯಲ್ಲಿ ಇತ್ತೀಚೆಗೆ ನಡೆದ ಕಾರ್ಯಕ್ರಮದಲ್ಲಿ ವಿಶೇಷ ಆಹ್ವಾನಿತರಾಗಿ ಪಾಲ್ಗೊಂಡಿದ್ದ ಕೂತಂಬಟ್ಟಿರ ಎಂ. ಹುಸೈನಾರ್ ಅವರಿಗೆ ಕೊಡವ ಮುಸ್ಲಿಮರ ಸಾಂಪ್ರದಾಯಕ ಪೇಟಧಾರಣೆ ಮಾಡಿ ಶಾಲು ಹೊದಿಸಿ ಸ್ಮರಣಿಕೆ, ಸನ್ಮಾನ ಪತ್ರ ಮತ್ತು ಪುಷ್ಪಗುಚ್ಚ ಅರ್ಪಿಸಿ ಸನ್ಮಾನಿಸಲಾಯಿತು. ಸನ್ಮಾನ ಸಮಾರಂಭದಲ್ಲಿ ಶಾಸಕ ಕೆ.ಜಿ. ಬೋಪಯ್ಯ ಉಪಸ್ಥಿತರಿದ್ದರು. ಮಾಜಿ ಸಚಿವ ಯಂ.ಸಿ. ನಾಣಯ್ಯ ಮುಖ್ಯ ಅತಿಥಿಯಾಗಿದ್ದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕೆ.ಎಂ.ಎ. ಅಧ್ಯಕ್ಷ ದುದ್ದಿಯಂಡ ಹೆಚ್. ಸೂಫಿ ವಹಿಸಿದ್ದರು. ವೇದಿಕೆಯಲ್ಲಿ ಅತಿಥಿಗಳಾಗಿದ್ದ ವೀರಾಜಪೇಟೆ ಪಟ್ಟಣ ಪಂಚಾಯಿತಿ ಮಾಜಿ ಅಧ್ಯಕ್ಷ ಇ.ಸಿ. ಜೀವನ್, ರಾಜ್ಯ ಪ್ರಶಸ್ತಿ ವಿಜೇತ ನಿವೃತ್ತ ಮುಖ್ಯೋಪಾಧ್ಯಾಯ ಕಿಕ್ಕರೆರ ಎ. ಉಮ್ಮರ್ ಮಾಸ್ಟರ್, ಕೆ.ಎಂ.ಎ. ಸ್ಥಾಪಕಾಧ್ಯಕ್ಷ, ಹಿರಿಯ ಪತ್ರಕರ್ತ ಕುವೇಂಡ ವೈ. ಹಂಝತುಲ್ಲಾ, ಕೊಡಗು ಬ್ಯಾರೀಸ್ ವೆಲ್ಫೇರ್ ಟ್ರಸ್ಟ್‍ನ ಅಧ್ಯಕ್ಷ ಬಿ.ಎ. ಷಂಶುದ್ದೀನ್ ಮೊದಲಾದವರು ಉಪಸ್ಥಿತರಿದ್ದರು. ಕೆ.ಎಂ.ಎ. ಉಪಾಧ್ಯಕ್ಷ ಡಾ. ಜೊಯಿಪೆರ ಎ. ಕುಂಞ ಅಬ್ದುಲ್ಲಾ ಸ್ವಾಗತಿಸಿದರು. ನಿರ್ದೇಶಕ ಮೀತಲತಂಡ ಎಂ. ಇಸ್ಮಾಯಿಲ್ ವಂದಿಸಿದರು.