ಸಿದ್ದಾಪುರ, ಸೆ. 8: ಕಾಂಗ್ರೆಸ್ ಪಕ್ಷದ ನೆರೆ ಸಂತ್ರಸ್ತರ ಅಧ್ಯಯನ ತಂಡ ಸಿದ್ದಾಪುರ ವ್ಯಾಪ್ತಿಯ ಪ್ರವಾಹ ಪೀಡಿತ ಗುಹ್ಯ ಹಾಗೂ ಕರಡಿಗೋಡು ಗ್ರಾಮಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಈ ಸಂದರ್ಭ ಅಧ್ಯಯನ ತಂಡದ ನೇತೃತ್ವ ವಹಿಸಿರುವ ಟಿ.ಪಿ. ರಮೇಶ್ ಮಾತನಾಡಿ, ಈಗಾಗಲೇ ತಂಡವು ಜಿಲ್ಲೆಯ ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಸಂತ್ರಸ್ತರ ಸಮಸ್ಯೆಗಳ ಬಗ್ಗೆ ಮಾಹಿತಿ ಪಡೆದಿದೆ ಎಂದರು. ಸಂತ್ರಸ್ತರಿಗೆ ಆಗಿರುವ ಹಾನಿಯ ಬಗ್ಗೆ ಸಂಪೂರ್ಣ ವರದಿಯನ್ನು ಕೆ.ಪಿ.ಸಿ.ಸಿ.ಗೆ ಕಳುಹಿಸಿ ಕೊಡಲಾಗುವದೆಂದು ಮಾಹಿತಿ ನೀಡಿದರು.

ಈ ಸಂದರ್ಭ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಶಿವು ಮಾದಪ್ಪ, ವೀರಾಜಪೇಟೆ ಬ್ಲಾಕ್ ಅಧ್ಯಕ್ಷ ಆರ್.ಕೆ. ಸಲಾಮ್, ಸಮಿತಿ ಸಂಚಾಲಕ ರಮನಾಥ್, ಜಿಲ್ಲಾ ಕಾಂಗ್ರೆಸ್ ಕಾರ್ಯದರ್ಶಿ ಎಂ.ಎಸ್. ವೆಂಕಟೇಶ್, ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಅನೀಫ, ಪ್ರಧಾನ ಕಾರ್ಯದರ್ಶಿ ರೆಜಿತ್ ಕುಮಾರ್ ಗುಹ್ಯ, ಕೆ.ಪಿ.ಸಿ.ಸಿ. ಸದಸ್ಯ ಜೋಸೆಫ್ ಶ್ಯಾಂ, ಗ್ರಾಮ ಪಂಚಾಯಿತಿ ಸದಸ್ಯರು ಇದ್ದರು.