ಮಡಿಕೇರಿ, ಸೆ.8 : ಜಿಲ್ಲೆಯಲ್ಲಿ ಇತ್ತೀಚೆಗೆ ಸಂಭವಿಸಿದ ಪ್ರಕೃತಿ ವಿಕೋಪಕ್ಕೆ ತುತ್ತಾಗಿರುವ ಸಂತ್ರಸ್ತರಿಗೆ ಲಯನ್ಸ್ ಕ್ಲಬ್ ಸಹಯೋಗದೊಂದಿಗೆ ತಾ. 9 ರಂದು (ಇಂದು) ಮೈತ್ರಿ ಸಭಾಂಗಣದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ ನಡೆಯಲಿದೆ ಎಂದು ಕ್ಲಬ್‍ನ ಪ್ರಮುಖ ಕೆ.ಟಿ.ಬೇಬಿ ಮ್ಯಾಥ್ಯು ತಿಳಿಸಿದ್ದಾರೆ.

ಜಿಲ್ಲಾ ಪಿ.ಸಿ. ಮತ್ತು ಪಿ.ಎಸ್.ಡಿ.ಟಿ. ಸಲಹಾ ಸಮಿತಿ, ಎಂ.ಟಿ.ಪಿ. ಸಮಿತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಕೇರಳ ಸಮಾಜಮ್ ಚಾರಿಟೇಬಲ್ ಸೊಸೈಟಿಯ ನೇತೃತ್ವದಲ್ಲಿ ನಡೆಯುವ ಶಿಬಿರದಲ್ಲಿ ಆರೋಗ್ಯ ತಪಾಸಣೆ ಮಾತ್ರವಲ್ಲದೆ ರಕ್ತ ಪರೀಕ್ಷೆ ಹಾಗೂ ಇತರ ಆರೋಗ್ಯ ಸಂಬಂಧಿತ ಪರೀಕ್ಷೆಗಳನ್ನು ನಡೆಸಲಾಗುವದು ಎಂದು ಅವರು ಪತ್ರಿಕಾ ಹೇಳಿಕೆ ನೀಡಿದ್ದಾರೆ.