ಕೂಡಿಗೆ, ಸೆ. 9: ಸಮೀಪದ ಮುಳ್ಳುಸೋಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗ್ರಾಮಸ್ಥರಿಗೆ ಅನುಕೂಲವಾಗುವಂತೆ ಪಂಚಾಯಿತಿ ಆವರಣದಲ್ಲಿ ಆಧಾರ್ ಕಾರ್ಡ್ ತಿದ್ದುಪಡಿ ಕೇಂದ್ರವನ್ನು ಪ್ರಾರಂಭಿಸಿದ್ದು, ಗ್ರಾಮ ಪಂಚಾಯಿತಿ ಅಧ್ಯಕ್ಷೆ ಭವ್ಯ ಚಾಲನೆ ನೀಡಿದರು.

ಗ್ರಾಮ ಪಂಚಾಯಿತಿಯಲ್ಲಿ ಆಧಾರ್ ಕಾರ್ಡ್ ತಿದ್ದುಪಡಿ ಕೇಂದ್ರ ಆರಂಭಿಸಿರುವದು ಸಾರ್ವಜನಿಕರಿಗೆ ಬಹಳ ಅನುಕೂಲವಾಗಿದೆ. ತಮ್ಮ ಆಧಾರ್ ಕಾರ್ಡ್‍ನಲ್ಲಿ ಇರುವ ನ್ಯೂನತೆಗಳನ್ನು ಸರಿಪಡಿಸಿಕೊಳ್ಳಲು ಸಾಧ್ಯವಾಗಲಿದೆ ಎಂದರು.

ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ರಾಜಶೇಖರ್, ಗ್ರಾಮ ಪಂಚಾಯಿತಿ ಉಪ್ಯಾಧಕ್ಷ ತಾರಾನಾಥ್, ಸದ್ಯಸರಾದ ಅರುಣಚಂದ್ರ, ಖಾದರ್ ಸೇರಿದಂತೆ ಗ್ರಾಮಸ್ಥರು ಇದ್ದರು.