ಸಿದ್ದಾಪುರ, ಸೆ. 9: ಪ್ರವಾಹ ಪೀಡಿತ ನೆಲ್ಲಿಹುದಿಕೇರಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿರುವ ನಿವಾಸಿಗಳಿಗೆ ಸರಕಾರದ ಅನ್ನಭಾಗ್ಯ ಯೋಜನೆ ಅಡಿಯಲ್ಲಿ ಬಿ.ಪಿ.ಎಲ್. ಪಡಿತರ ಚೀಟಿ ಹೊಂದಿದ ಎಲ್ಲಾ ಕುಟುಂಬಗಳಿಗೆ ಆಹಾರದ ಕಿಟ್‍ಗಳನ್ನು ಪಂಚಾಯಿತಿಯ ಸಭಾಂಗಣದಲ್ಲಿ ವಿತರಿಸಲಾಯಿತು. ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಪದ್ಮಾವತಿ, ಉಪಾಧ್ಯಕ್ಷೆ ಸಫಿಯಾ ಹಾಗೂ ಗ್ರಾಮ ಪಂಚಾಯಿತಿ ಸದಸ್ಯರು ಹಾಜರಿದ್ದರು.