ಮಡಿಕೇರಿ, ಸೆ.9 : ತೈಲೋತ್ಪನ್ನಗಳು ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಏರಿಕೆಯನ್ನು ನಿಯಂತ್ರಿಸುವಲ್ಲಿ ಬಿಜೆಪಿ ನೇತೃತ್ವದ ಕೇಂದ್ರ ಸರಕಾರ ಸಂಪೂರ್ಣವಾಗಿ ವಿಫಲವಾಗಿದೆ ಎಂದು ಆರೋಪಿಸಿರುವ ಜಾತ್ಯತೀತ ಜನತಾದಳದ ಕೊಡಗು ಜಿಲ್ಲಾ ಮುಖಂಡ ಕೆ.ಎಂ.ಗಣೇಶ್, ತಾ.10 ರಂದು ನಗರದ ಜಿಲ್ಲಾಧಿಕಾರಿಗಳ ಕಚೇರಿ ಎದುರು ಪಕ್ಷದ ವತಿಯಿಂದ ಪ್ರತಿಭಟನೆ ನಡೆಸಲಾಗುವದೆಂದು ತಿಳಿಸಿದ್ದಾರೆ. ಬೆಳಗ್ಗೆ 11.30 ಗಂಟೆಗೆ ಜೆಡಿಎಸ್ ಮೂಲಕ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಲಾಗುವದು ಎಂದು ತಿಳಿಸಿದ್ದಾರೆ.