ಮಡಿಕೇರಿ, ಸೆ. 9: ಬೆಂಗಳೂರಿನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ‘ನಾನು ನಗರ ನಕ್ಸಲ್’ ಎಂದು ಫಲಕ ತಗುಲಿಸಿಕೊಂಡಿದ್ದ ಜ್ಞಾನಪೀಠ ಪ್ರಶಸ್ತಿ ವಿಜೇತ ಸಾಹಿತಿ ಗಿರೀಶ್ ಕಾರ್ನಾಡ್ ವಿರುದ್ಧ ಮಡಿಕೇರಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಂಗಳೂರಿನಲ್ಲಿ ಇತ್ತೀಚೆಗೆ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ವಿರೋಧಿಸಿ ನಡೆದ ಕಾರ್ಯಕ್ರಮವೊಂದರಲ್ಲಿ ‘ನಾನು ನಗರ ನಕ್ಸಲ್’ ಎಂದು ಬೋರ್ಡ್ ತಗುಲಿಸಿಕೊಂಡಿದ್ದ ಗಿರೀಶ್ ಕಾರ್ನಾಡ್ ವಿರುದ್ಧ ಕಾನೂನು ಕ್ರಮಕೈಗೊಳ್ಳಬೇಕೆಂದು ಒತ್ತಾಯಿಸಿ ವಿಶ್ವ ಹಿಂದೂ ಪರಿಷದ್ ವಿಶೇಷ ಸಂಪರ್ಕ ಪ್ರಮುಖ್ ಎನ್.ಕೆ. ಅಜಿತ್ ಕುಮಾರ್ ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಗಿರೀಶ್ ಕಾರ್ನಾಡ್ ಅವರನ್ನು ಬಂಧಿಸದಿದ್ದಲ್ಲಿ ಪ್ರತಿಭಟನೆ ನಡೆಸುವದಾಗಿಯೂ ಅಜಿತ್ ಕುಮಾರ್ ಎಚ್ಚರಿಸಿದ್ದಾರೆ.