ಮಡಿಕೇರಿ, ಸೆ. 10 : ಗಣೇಶ ಚತುರ್ಥಿ ಪ್ರಯುಕ್ತ ಶ್ರೀ ಭಗಂಡೇಶ್ವರ ಹಾಗೂ ತಲಕಾವೇರಿ ದೇವಾಲಯಗಳಲ್ಲಿ ತಾ. 13 ರಂದು ಬೆಳಿಗ್ಗೆ 9 ಗಂಟೆಯಿಂದ ಗಣಹೋಮ, ಮಧ್ಯಾಹ್ನ 12 ಗಂಟೆಗೆ ಪೂರ್ಣಾಹುತಿ, ಮಹಾ ಮಂಗಳಾರತಿ, ಪ್ರಸಾದ ವಿನಿಯೋಗ ಹಾಗೂ ಶ್ರೀ ಭಗಂಢೇಶ್ವರ ದೇವಾಲಯದಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮಗಳು ಜರುಗಲಿದೆ.