ಮಡಿಕೇರಿ, ಸೆ. 10: ಜಿಲ್ಲೆಯ ಬಹಳಷ್ಟು ಗ್ರಾಮಗಳು ಪ್ರಕೃತಿ ವಿಕೋಪದಿಂದ ಹಾನಿಗೊಳಗಾಗಿದ್ದು, ಭಾರೀ ಮಳೆಯಿಂದ ಹಾಗೂ ಭೂಕುಸಿತದಿಂದಾಗಿ ಹಲವರಿಗೆ ವಿವಿಧ ಇಲಾಖೆಯಿಂದ ನೀಡಲಾಗಿರುವ ಪ್ರಮಾಣ ಪತ್ರಗಳನ್ನು ಕಳೆದುಕೊಂಡಿರುವ ಸಂಭವವಿರುವ ಹಿನ್ನೆಲೆಯಲ್ಲಿ, ಸಂತ್ರಸ್ತರಿಗೆ ಈ ಪ್ರಮಾಣ ಪತ್ರಗಳನ್ನು ಒದಗಿಸುವ ಉದ್ದೇಶದಿಂದ ಕಂದಾಯ ಇಲಾಖೆಯ ನಾಡಕಚೇರಿಗಳಲ್ಲಿರುವ ಅಟಲ್‍ಜೀ ಜನಸ್ನೇಹಿ ಕೇಂದ್ರಗಳಲ್ಲಿ ಹಾಗೂ ಜಿಲ್ಲೆಯ ಒಟ್ಟು 104 ಗ್ರಾಮ ಪಂಚಾಯಿತಿಗಳಲ್ಲಿರುವ ಬಾಪೂಜಿ ಸೇವಾ ಕೇಂದ್ರಗಳಲ್ಲಿ ಪ್ರಮಾಣ ಪತ್ರ ಕಳೆದುಕೊಂಡಿರುವ ಸಂತ್ರಸ್ತರಿಗೆ ಪ್ರಮಾಣ ಪತ್ರಗಳನ್ನು ಉಚಿತವಾಗಿ ಮರುಮುದ್ರಿಸಿ ನೀಡಲು ವ್ಯವಸ್ಥೆ ಕಲ್ಪಿಸಲಾಗಿದೆ.

ವಿವಿಧ ಇಲಾಖೆಗಳಿಂದ ಪಡೆದ ದಾಖಲೆಗಳು ಮತ್ತು ಪ್ರಮಾಣಪತ್ರಗಳ ಮರುಮುದ್ರಣಕ್ಕಾಗಿ hಣಣಠಿ://ತಿತಿತಿ.ಠಿಚಿಡಿihಚಿಡಿಚಿ.ಞಚಿಡಿಟಿಚಿಣಚಿಞಚಿ.gov.iಟಿ ವೆಬ್‍ಸೈಟ್‍ಗೆ ಭೇಟಿ ನೀಡಿ ಕಳೆದುಕೊಂಡಿರುವ ದಾಖಲೆಗಳ ವಿವರಗಳನ್ನು ನಮೂದಿಸಲು ಜಿಲ್ಲಾಧಿಕಾರಿ ಪಿ.ಐ. ಶ್ರೀವಿದ್ಯಾ ಅವರು ತಿಳಿಸಿದ್ದಾರೆ.