ಮಡಿಕೇರಿ, ಸೆ. 10: ಪ್ರಕೃತಿ ವಿಕೋಪದಿಂದಾಗಿ ಆಸ್ತಿ-ಪಾಸ್ತಿ, ಮನೆ ಕಳೆದುಕೊಂಡಿರುವ ಸಂತ್ರಸ್ತರಿಗೆ ಪುನರ್ವಸತಿ ಕಲ್ಪಿಸಲು ಜಿಲ್ಲಾಡಳಿತ ವಿವಿಧ ಗ್ರಾಮಗಳಲ್ಲಿ ನಿವೇಶನ ಗುರುತು ಮಾಡಿದೆ.
ಕರ್ಣಂಗೇರಿ ಗ್ರಾಮದ ಸರ್ವೆ ನಂ.178 ರಲ್ಲಿ ನಾಲ್ಕು ಎಕರೆ ಗುರುತಿಸಲಾಗಿದ್ದು, ಸುಮಾರು 80 ನಿವೇಶನಗಳು ಲಭ್ಯವಾಗಲಿದೆ. ಈ ಗ್ರಾಮದಲ್ಲಿ ಕರ್ಣಂಗೇರಿಯ 13, ಮಕ್ಕಂದೂರಿನ 11, ಹಚ್ಚಿನಾಡಿ 1, ಹೊದಕಾನ 9 ಹಾಗೂ ನಗರದ 43 ಕುಟುಂಬಗಳಿಗೆ ಒಟ್ಟು 65 ಕುಟುಂಬಗಳಿಗೆ ನಿವೇಶನ ಹಂಚಿಕೆ ಮಾಡಲು ಉದ್ದೇಶಿಸಲಾಗಿದೆ.
ಕೆ.ನಿಡುಗಣೆ ಗ್ರಾಮದ ಸರ್ವೆ ನಂ.1/13 ರಲ್ಲಿ ಅಂದಾಜು 5 ಎಕರೆ ಜಾಗ ಗುರುತಿಸಲಾಗಿದ್ದು, ಕಾಲೂರು ಗ್ರಾಮದ 22 ಕುಟುಂಬಗಳಿಗೆ, ಗಾಳಿಬೀಡು ಗ್ರಾ.ಪಂ. ವ್ಯಾಪ್ತಿಯಲ್ಲಿ ಸರ್ವೆ ನಂ.103 ರಲ್ಲಿ 7 ಎಕರೆ ಜಾಗ ಗುರುತಿಸಲಾಗಿದ್ದು, ಹೆಬ್ಬೆಟ್ಟಗೇರಿಯ 90 ಕುಟುಂಬಗಳಿಗೆ, ಗಾಳಿಬೀಡು ಸರ್ವೆ ನಂ.99/3, 100/3, 100/4 ರಲ್ಲಿ 13 ಎಕರೆ ಜಾಗ ಗುರುತಿಸಲಾಗಿದ್ದು, ಗಾಳಿಬೀಡು ಗ್ರಾಮದ 19 ಕುಟುಂಬಗಳಿಗೆ, ನಿಡುವಟ್ಟಿನ 26 ಕುಟುಂಬಗಳಿಗೆ ಬಾರಿಬೆಳ್ಳಚ್ಚು 2 ಕುಟುಂಬಗಳಿಗೆ, ಒಂದನೇ ಮೊಣ್ಣಂಗೇರಿ 9 ಕುಟುಂಬಗಳಿಗೆ ನಿವೇಶನ ಹಂಚಿಕೆ ಮಾಡಲು ಉದ್ದೇಶಿಸಲಾಗಿದೆ.
ಮದೆ ಗ್ರಾಮದ ಸರ್ವೆ ನಂ. 399ರಲ್ಲಿ 10 ಎಕರೆ ಜಾಗ ಗುರುತಿಸಲಾಗಿದ್ದು, ಎರಡನೇ ಮೊಣ್ಣಂಗೇರಿಯ 188 ಕುಟುಂಬಗಳಿಗೆ, ಮದೆ ಗ್ರಾಮದ 79 ಕುಟುಂಬಗಳಿಗೆ, ಸಂಪಾಜೆಯಲ್ಲಿ ಸರ್ವೆ ನಂ.54/1 ರಲ್ಲಿ 1.50 ಎಕರೆ ಗುರುತಿಸಲಾಗಿದ್ದು, ಸಂಪಾಜೆಯ 4 ಕುಟುಂಬಗಳಿಗೆ, ಬಿಳಿಗೇರಿಯ ಸರ್ವೆ ನಂ.347/3 ರಲ್ಲಿ 1.88 ಎಕರೆ ಜಾಗ ಗುರುತಿಸಲಾಗಿದ್ದು, ಹೆರವನಾಡಿನ 10 ಕುಟುಂಬಗಳಿಗೆ ಒಟ್ಟು 281 ಕುಟುಂಬಗಳಿಗೆ, ಜಂಬೂರು ಗ್ರಾಮದ ಸರ್ವೆ ನಂ.13/1 ರಲ್ಲಿ 50 ಎಕರೆ ಜಾಗ ಗುರುತಿಸಲಾಗಿದ್ದು, ಮಕ್ಕಂದೂರು ಗ್ರಾಮದ 99 ಕುಟುಂಬಗಳಿಗೆ, ಎಮ್ಮೆತಾಳು ಗ್ರಾಮದ 39 ಕುಟುಂಬಳಿಗೆ, ಮುಕ್ಕೋಡ್ಲು ಗ್ರಾಮದ 9 ಕುಟುಂಬಗಳಿಗೆ, ಮೇಘತ್ತಾಳು ಗ್ರಾಮದ 26 ಕುಟುಂಬಗಳಿಗೆ ಒಟ್ಟು 173 ಕುಟುಂಬಗಳಿಗೆ ಜಾಗ ಗುರುತಿಸಲಾಗಿದೆ.
ಸೋಮವಾರಪೇಟೆ ತಾಲೂಕಿನ ಚೌಡ್ಲು 2 ಕುಟುಂಬಗಳಿಗೆ, ಕಿರಂಗಂದೂರು 6, ಬೇಳೂರು 4, ಹಾನಗಲ್ಲು 3, ನೆರುಗಳಲೆ 1, ಹಾಡಗೇರಿ 22, ಮುವತ್ತೋಕ್ಲು 4, ಇಗ್ಗೋಡ್ಲು 9, ಕಡಗದಾಳು 11, ಕಾಂಡನಕೊಲ್ಲಿ 5, ಕೊಪ್ಪತ್ತೂರು 3, ಜಂಬೂರು 4, ಗರ್ವಾಲೆ 2, ಶಿರಂಗಳ್ಳಿ 1, ಮಂಕ್ಯ 1, ಕಿಕ್ಕರಳ್ಳಿ 1, ಹಾಲೇರಿ 5 ಒಟ್ಟು 84 ಕುಟುಂಬಗಳಿಗೆ ನಿವೇಶನ ಗುರುತಿಸಲಾಗಿದೆ ಎಂದು ವಿಶೇಷ ಹೆಚ್ಚುವರಿ ಜಿಲ್ಲಾಧಿಕಾರಿ ಎಂ.ಕೆ.ಜಗದೀಶ್ ಅವರು ಮಾಹಿತಿ ನೀಡಿದ್ದಾರೆ.