ಸೋಮವಾರಪೇಟೆ, ಸೆ. 11: ಜಲಪ್ರಳಯದಿಂದ ಸಂತ್ರಸ್ತರಾದ ತಾಲೂಕಿನ ಗರ್ವಾಲೆ ಗ್ರಾ.ಪಂ. ವ್ಯಾಪ್ತಿಯ ಸಾರ್ವಜನಿಕರಿಗೆ ಸರ್ಕಾರದಿಂದ ಬಿಡುಗಡೆಯಾದ ಪರಿಹಾರ ಧನದ ಚೆಕ್‍ಗಳನ್ನು ವಿತರಿಸಲಾಯಿತು.
ಗರ್ವಾಲೆ ಗ್ರಾ.ಪಂ. ಸಭಾಂಗಣದಲ್ಲಿ 409 ಮಂದಿ ಫಲಾನುಭವಿಗಳಿಗೆ ಸಂಸದ ಪ್ರತಾಪ್ ಸಿಂಹ, ಶಾಸಕ ಎಂ.ಪಿ. ಅಪ್ಪಚ್ಚು ರಂಜನ್, ತಾ.ಪಂ. ಉಪಾಧ್ಯಕ್ಷ ಅಭಿಮನ್ಯುಕುಮಾರ್, ಗ್ರಾ.ಪಂ. ಅಧ್ಯಕ್ಷ ಸುಭಾಷ್ ಸೇರಿದಂತೆ ಇತರರು ಪರಿಹಾರ ಧನದ ಚೆಕ್‍ಗಳನ್ನು ವಿತರಿಸಿದರು.