ಮಡಿಕೇರಿ, ಸೆ. 11: ಶ್ರೀಮಂಗಲ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿನ ಶ್ರೀಮಂಗಲ ಮುಖ್ಯ ಪಟ್ಟಣದ ಬಸ್ ನಿಲ್ದಾಣದಲ್ಲಿ ಕಳೆದ ಮೂರು ವರ್ಷಗಳಿಂದ ಗೌರಿ-ಗಣೇಶ ಉತ್ಸವವನ್ನು ಆಚರಿಸಿಕೊಂಡುಬರುತ್ತಿದ್ದು, ಈ ಬಾರಿ ಪ್ರಾಕೃತಿಕ ವಿಕೋಪದಿಂದಾಗಿ ಸಂಭವಿಸಿದ ಅನಾಹುತದ ಹಿನ್ನೆಲೆ ಉತ್ಸವ ರದ್ದುಗೊಳಿಸಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.