ಕುಶಾಲನಗರ, ಸೆ. 11: ಪ್ರಾಥಮಿಕ ಮತ್ತು ಪ್ರೌಢಶಾಲಾ ವಿದ್ಯಾರ್ಥಿಗಳ ತಾಲೂಕು ಮಟ್ಟದ ಕಬಡ್ಡಿ ಪಂದ್ಯಾವಳಿ ಕುಶಾಲನಗರ ಸರಕಾರಿ ಮಾದರಿ ಪ್ರಾಥಮಿಕ ಶಾಲಾ ಮೈದಾನದಲ್ಲಿ ನಡೆಯಿತು. ತಾಲೂಕು ವ್ಯಾಪ್ತಿಯ 12 ಶಾಲೆಗಳ ವಿದ್ಯಾರ್ಥಿಗಳ ತಂಡ ಪಂದ್ಯಾವಳಿಯಲ್ಲಿ ಪಾಲ್ಗೊಂಡಿದ್ದವು. ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಕ ವೆಂಕಟೇಶ್ ಪಂದ್ಯಾವಳಿಗೆ ಚಾಲನೆ ನೀಡಿದರು.