ಮಡಿಕೇರಿ, ಸೆ. 15: ಜಿಲ್ಲಾ ಪಂಚಾಯಿತಿ ಸಾಮಾನ್ಯ ಸಭೆ ಜಿ.ಪಂ. ಅಧ್ಯಕ್ಷ ಬಿ.ಎ. ಹರೀಶ್ ಅಧ್ಯಕ್ಷತೆಯಲ್ಲಿ ತಾ. 18 ರಂದು ಬೆಳಿಗ್ಗೆ 10.30 ಗಂಟೆಗೆ ನಗರದ ಕೋಟೆ ಹಳೇ ವಿಧಾನ ಸಭಾಂಗಣದಲ್ಲಿ ನಡೆಯಲಿದೆ ಎಂದು ಜಿ.ಪಂ. ಸಿಇಓ ಪ್ರಶಾಂತ್ ಕುಮಾರ್ ಮಿಶ್ರ ತಿಳಿಸಿದ್ದಾರೆ.
ಗೋಣಿಕೊಪ್ಪಲು : ಶ್ರೀಮಂಗಲ ಗ್ರಾಮ ಪಂಚಾಯಿತಿಯ 2017-18ನೇ ಸಾಲಿನ ಜಮಾಬಂದಿ ಕಾರ್ಯಕ್ರಮವನ್ನು ತಾ. 18 ರಂದು ಪೂರ್ವಾಹ್ನ 11.30 ಗಂಟೆಗೆ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಚೋಕೀರ ಕಲ್ಪನಾ ತಿಮ್ಮಯ್ಯ ಅವರ ಅಧ್ಯಕ್ಷತೆಯಲ್ಲಿ ಶ್ರೀಮಂಗಲ ಗ್ರಾಮ ಪಂಚಾಯಿತಿ ಸಭಾಂಗಣದಲ್ಲಿ ಕರೆಯಲಾಗಿದೆ.
ಸೋಮವಾರಪೇಟೆ : ಸಮೀಪದ ದೊಡ್ಡಮಳ್ತೆ ಗ್ರಾಮ ಪಂಚಾಯಿತಿಯ ಗ್ರಾಮಸಭೆ ತಾ. 19 ರಂದು ಗ್ರಾ.ಪಂ. ಕಚೇರಿ ಸಭಾಂಗಣದಲ್ಲಿ ಅಧ್ಯಕ್ಷ ಎಸ್.ಡಿ. ದಿವಾಕರ್ ಅಧ್ಯಕ್ಷತೆಯಲ್ಲಿ ನಡೆಯಲಿದೆ.
ಅಂದು ಪೂರ್ವಾಹ್ನ 11ಕ್ಕೆ ನಡೆಯುವ ಸಭೆಗೆ ಜಿ.ಪಂ. ಸದಸ್ಯ ಬಿ.ಜೆ. ದೀಪಕ್, ತಾ.ಪಂ. ಸದಸ್ಯೆ ಕುಸುಮ ಅಶ್ವಥ್, ನೋಡಲ್ ಅಧಿಕಾರಿಯಾಗಿ ತೋಟಗಾರಿಕಾ ಇಲಾಖೆಯ ಸಹಾಯಕ ನಿರ್ದೇಶಕ ಮುತ್ತಪ್ಪ ಅವರುಗಳು ಭಾಗವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
ಗೋಣಿಕೊಪ್ಪಲು : ಅಮ್ಮತ್ತಿ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಒಳಪಡುವ ಗ್ರಾಮಗಳ 2018-19ನೇ ಸಾಲಿನ ಗ್ರಾಮ ಸಭೆ ತಾ. 17 ರಂದು ಪೂರ್ವಾಹ್ನ 11 ಗಂಟೆಗೆ ಅಮ್ಮತ್ತಿ ಪಂಚಾಯಿತಿ ಸಭಾಂಗಣದಲ್ಲಿ ಅಧ್ಯಕ್ಷೆ ಶಾಂತ ಪಿ.ಎಸ್. ಅವರ ಅಧ್ಯಕ್ಷತೆಯಲ್ಲಿ ನಡೆಯಲಿದೆ.
ಮಡಿಕೇರಿ : ಬೇಂಗೂರು ಗ್ರಾಮ ಪಂಚಾಯಿತಿಯ 2018-19ನೇ ಸಾಲಿನ ಗ್ರಾಮಸಭೆ ತಾ. 27 ರಂದು ಪೂರ್ವಾಹ್ನ 11 ಗಂಟೆಗೆ ಅಶೋಕ್ ಕೆ.ಬಿ. ಅವರ ಅಧ್ಯಕ್ಷತೆಯಲ್ಲಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಚೇರಂಬಾಣೆಯಲ್ಲಿ ನಡೆಯಲಿದೆ.