ಹೆಬ್ಬಾಲೆ, ಸೆ. 15: ಹೆಬ್ಬಾಲೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ರುವ ಕೆರೆಗಳನ್ನು ಗುರುತು ಮಾಡಿ ಅವುಗಳಲ್ಲಿ ತುಂಬಿರುವ ಹೂಳು ತೆಗೆದು ಅಭಿವೃದ್ಧಿಪಡಿಸುವ ಮೂಲಕ ರೈತರಿಗೆ ಅನುಕೂಲ ಮಾಡಿಕೊಡ ಬೇಕು ಎಂದು ಹೆಬ್ಬಾಲೆ ಗ್ರಾಮ ಪಂಚಾಯಿತಿ ಗ್ರಾಮಸಭೆಯಲ್ಲಿ ಗ್ರಾಮಸ್ಥರು ಆಗ್ರಹಿಸಿದರು.

ಸಮೀಪದ ಹೆಬ್ಬಾಲೆ ಗ್ರಾಮದ ಎಪಿಎಂಸಿ ಮಾರುಕಟ್ಟೆ ಆವರಣದಲ್ಲಿ ಗ್ರಾ.ಪಂ. ಅಧ್ಯಕ್ಷೆ ಲತಾ ಸತೀಶ್ ಅಧ್ಯಕ್ಷತೆಯಲ್ಲಿ ಏರ್ಪಡಿಸಿದ್ದ 2017-18 ಸಾಲಿನ ಮೊದಲ ಹಂತದ ಗ್ರಾಮಸಭೆಯಲ್ಲಿ ಸರ್ಕಾರ ಸಣ್ಣ ನೀರಾವರಿ ಇಲಾಖೆ ಮೂಲಕ

ಹೆಬ್ಬಾಲೆ, ಸೆ. 15: ಹೆಬ್ಬಾಲೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ರುವ ಕೆರೆಗಳನ್ನು ಗುರುತು ಮಾಡಿ ಅವುಗಳಲ್ಲಿ ತುಂಬಿರುವ ಹೂಳು ತೆಗೆದು ಅಭಿವೃದ್ಧಿಪಡಿಸುವ ಮೂಲಕ ರೈತರಿಗೆ ಅನುಕೂಲ ಮಾಡಿಕೊಡ ಬೇಕು ಎಂದು ಹೆಬ್ಬಾಲೆ ಗ್ರಾಮ ಪಂಚಾಯಿತಿ ಗ್ರಾಮಸಭೆಯಲ್ಲಿ ಗ್ರಾಮಸ್ಥರು ಆಗ್ರಹಿಸಿದರು.

ಸಮೀಪದ ಹೆಬ್ಬಾಲೆ ಗ್ರಾಮದ ಎಪಿಎಂಸಿ ಮಾರುಕಟ್ಟೆ ಆವರಣದಲ್ಲಿ ಗ್ರಾ.ಪಂ. ಅಧ್ಯಕ್ಷೆ ಲತಾ ಸತೀಶ್ ಅಧ್ಯಕ್ಷತೆಯಲ್ಲಿ ಏರ್ಪಡಿಸಿದ್ದ 2017-18 ಸಾಲಿನ ಮೊದಲ ಹಂತದ ಗ್ರಾಮಸಭೆಯಲ್ಲಿ ಸರ್ಕಾರ ಸಣ್ಣ ನೀರಾವರಿ ಇಲಾಖೆ ಮೂಲಕ ತುಂಬಿಸಿದ್ದಾರೆ. ಆದರೆ ಹೆಬ್ಬಾಲೆ ವ್ಯಾಪ್ತಿಯಲ್ಲಿ ಕೆರೆಗಳನ್ನು ಅಕ್ರಮವಾಗಿ ಒತ್ತುವರಿ ಮಾಡಿಕೊಂಡು ಕೆರೆ ಇಲ್ಲದಂತೆ ಮಾಡಿದ್ದಾರೆ.

ಕೆರೆಗಳ ಒತ್ತುವರಿಯನ್ನು ಕೂಡಲೇ ತೆರೆವುಗೊಳಿಸಬೇಕು ಎಂದು ಗ್ರಾಮಸ್ಥರು ಒತ್ತಾಯಿಸಿದರು. ನೀರಾವರಿ ಇಲಾಖೆಗೆ ಸಂಬಂಧಿಸಿದ ನಾಲೆಗಳ ಅಸಮರ್ಪಕ ನಿರ್ವಹಣೆಯಿಂದಾಗಿ ನಾಲೆಗಳು ಒಡೆದು ರೈತರ ಜಮೀನಿಗೆ ನೀರು ನುಗ್ಗಿ ಅಪಾರ ಪ್ರಮಾಣದಲ್ಲಿ ಕೃಷಿ ಹಾನಿಯಾಗಿದೆ. ಇದಕ್ಕೆ ನೀರಾವರಿ ಅಧಿಕಾರಿಗಳ ಬೇಜವಾಬ್ದಾರಿಯೇ ಕಾರಣ ಎಂದು ರೈತ ಮುಖಂಡ ನಾರಾಯಣ ಆಕ್ರೋಶ ವ್ಯಕ್ತಪಡಿಸಿದರು.

ನೋಡಲ್ ಅಧಿಕಾರಿ ಕೃಷಿ ಇಲಾಖೆಯ ಕೃಷಿ ಅಧಿಕಾರಿ ಮಾಧವ ರಾವ್ ಮಾತನಾಡಿ, ರೈತರಿಗೆ ಕೃಷಿ ಇಲಾಖೆಯಲ್ಲಿ ಸಿಗಬಹುದಾದ ಸವಲತ್ತುಗಳ ಬಗ್ಗೆ ಮಾಹಿತಿ ನೀಡಿದರು. ಕಳೆದ ಸಾಲಿನ ನಿವೇಶನ ಪಡೆದ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಫಲಾನುಭವಿಗಳ ಪಟ್ಟಿಯನ್ನು ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ರಾಕೇಶ್ ಸಭೆಗೆ ಮಂಡಿಸಿದರು. ಸಭೆಯಲ್ಲಿ ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆ ಎಚ್.ಸಿ. ಪದ್ಮ, ಸದಸ್ಯರಾದ ಶಿವನಂಜಪ್ಪ ದಿನೇಶ್, ವೆಂಕಟೇಶ್, ಮಧು ಸೂದನ್ ಪ್ರಮೀಳಾ, ಸರೋಜಮ್ಮ, ಪ್ರೇಮ, ಚೇತನ್ ಸೇರಿದಂತೆ ಇನ್ನಿತರರು ಹಾಜರಿದ್ದರು. ಇದೇ ಸಂದರ್ಭ ವಿವಿಧ ಇಲಾಖೆಗಳಿಂದ ಆಗಮಿಸಿದ್ದ ಅಧಿಕಾರಿಗಳು ತಮ್ಮ ಇಲಾಖೆಯಲ್ಲಿ ಸಿಗುವ ವಿವಿಧ ಸೌಲಭ್ಯಗಳ ಬಗ್ಗೆ ಸಭೆಗೆ ಮಾಹಿತಿ ನೀಡಿದರು.