ಮಡಿಕೇರಿ, ಸೆ.15 : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ ತಾ. 17 ರಂದು (ನಾಳೆ) ಬೆಳಿಗ್ಗೆ 11 ಗಂಟೆಗೆ ನಗರದ ಮೈತ್ರಿ ಸಭಾಂಗಣದಲ್ಲಿ ವಿಶ್ವಕರ್ಮ ಜಯಂತ್ಯೋತ್ಸವ ಸಮಾರಂಭ ನಡೆಯಲಿದೆ. ಜನಪ್ರತಿನಿಧಿಗಳು ಸೇರಿದಂತೆ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್‍ನ ಅಧ್ಯಕ್ಷ ಬಿ.ಎಸ್.ಲೋಕೇಶ್ ಸಾಗರ್, ಜಿಲ್ಲಾ ವಿಶ್ವಕರ್ಮ ಒಕ್ಕೂಟದ ಅಧ್ಯಕ್ಷ ಎಸ್.ಜೆ. ದೇವದಾಸ್, ಸರಸ್ವತಿ ಡಿ.ಇಡಿ. ಕಾಲೇಜಿನ ಪ್ರಾಂಶುಪಾಲ ಕುಮಾರ್, ಜಿಲ್ಲಾಧಿಕಾರಿ ಪಿ.ಐ. ಶ್ರೀವಿದ್ಯಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಸುಮನ್ ಡಿ. ಪೆಣ್ಣೇಕರ್, ಜಿ.ಪಂ.ಸಿಇಒ ಪ್ರಶಾಂತ್ ಕುಮಾರ್ ಮಿಶ್ರ, ಇತರರು ಪಾಲ್ಗೊಳ್ಳಲಿದ್ದಾರೆ.