ಮಡಿಕೇರಿ, ಸೆ. 15: ಕಾಫಿ ಮಂಡಳಿಯಿಂದ ಕಾಫಿ ತೋಟದ ಕ್ಯೂರಿಂಗ್ ಕಾರ್ಮಿಕರ ಮಕ್ಕಳಿಗೆ 2017-18 ರಲ್ಲಿ ಎಸ್.ಎಸ್.ಎಲ್.ಸಿ ಉತ್ತೀರ್ಣರಾಗಿ ಪ್ರಸಕ್ತ 2018-19 ನೇ ಸಾಲಿನಲ್ಲಿ ಪ್ರಥಮ ಪಿ.ಯು.ಸಿ., ಪಾಲಿಟಿಕ್ನಿಕ್, ವೃತ್ತಿಪರ ಶಿಕ್ಷಣಗಳಲ್ಲಿ ಓದುತ್ತಿರುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ದೊರೆಯಲಿದೆ. 2017-18 ರಲ್ಲಿ ದ್ವಿತೀಯ ಪಿಯುಸಿ ಉತ್ತೀರ್ಣರಾಗಿ ಪ್ರಥಮ ವರ್ಷದ ಎಂ.ಬಿ.ಬಿ.ಎಸ್., ಬಿ.ಇ., ಫಾರ್ಮಸಿ, ನರ್ಸಿಂಗ್ ಮತ್ತು ಪದವಿ ಹಾಗೂ ಸ್ನಾತಕೋತ್ತರ ಪದವಿಯಲ್ಲಿ ಓದುತ್ತಿರುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ವಿದ್ಯಾರ್ಥಿಗಳಿಗೆ ಅಧಿಕ ಅಂಕ ಪಡೆದ ಆಧಾರದ ಮೇಲೆ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತ ವಿದ್ಯಾರ್ಥಿಗಳು ಹತ್ತಿರದ ಕಾಫಿ ಮಂಡಳಿ ಕಚೇರಿಗಳಿಂದ ಅರ್ಜಿಗಳನ್ನು ಪಡೆದು, ಭರ್ತಿ ಮಾಡಿದ ಅರ್ಜಿಗಳನ್ನು ಆಯಾಯ ಕಾಲೇಜುಗಳಿಂದ ದೃಢೀಕರಿಸಿ ಹತ್ತಿರದ ಕಾಫಿ ಮಂಡಳಿ ಕಚೇರಿಗಳಿಗೆ ಖುದ್ದಾಗಿ ಸಲ್ಲಿಸಲು ಕೋರಲಾಗಿದೆ. ಅರ್ಜಿ ಸಲ್ಲಿಸಲು ಅಕ್ಟೋಬರ್ 10 ಕೊನೆಯ ದಿನಾಂಕವಾಗಿರುತ್ತದೆ. ನಂತರ ಬಂದ ಅರ್ಜಿಗಳನ್ನು ತಿರಸ್ಕರಿಸಲಾಗುವದು. ಹೆಚ್ಚಿನ ಮಾಹಿತಿಗಾಗಿ ಹತ್ತಿರದ ಕಾಫಿ ಮಂಡಳಿಯ ಕಚೇರಿಗಳನ್ನು ಸಂಪರ್ಕಿಸಬಹುದಾಗಿದೆ ಎಂದು ಮಡಿಕೇರಿ ಕಾಫಿ ಮಂಡಳಿಯ ಉಪ ನಿರ್ದೇಶಕರು ತಿಳಿಸಿದ್ದಾರೆ.

ವಿಕಲಚೇತನ ವಿದ್ಯಾರ್ಥಿಗಳಿಂದ

2018ನೇ ಸಾಲಿನಲ್ಲಿ ನ್ಯಾಷನಲ್ ಇ-ಸ್ಕಾಲರ್‍ಷಿಪ್ ಯೋಜನೆಯಡಿ ವಿಕಲಚೇತನರ ರಾಷ್ಟ್ರೀಯ ವಿದ್ಯಾರ್ಥಿ ವೇತನಕ್ಕೆ ವಿಕಲಚೇತನ ವಿದ್ಯಾರ್ಥಿಗಳಿಂದ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಪ್ರಿ ಮೆಟ್ರಿಕ್‍ನಲ್ಲಿ ಸೆಪ್ಟೆಂಬರ್ 30 ಹಾಗೂ ಪೋಸ್ಟ್ -ಮೆಟ್ರಿಕ್ ಮತ್ತು ಟಾಪ್ ಕ್ಲಾಸ್‍ನಲ್ಲಿ ಅಕ್ಟೋಬರ್ 31 ಕೊನೆಯ ದಿನವಾಗಿದ್ದು, ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.

ಹೆಚ್ಚಿನ ಸಂಖ್ಯೆಯಲ್ಲಿ ವಿಕಲಚೇತನ ವಿದ್ಯಾರ್ಥಿಗಳು ಕೇಂದ್ರ ಸರ್ಕಾರದ ವಿದ್ಯಾರ್ಥಿ ವೇತನವನ್ನು ಪಡೆದುಕೊಳ್ಳಬೇಕಾಗಿ ಕೋರಿದೆ. ಅರ್ಹ ಅಭ್ಯರ್ಥಿಗಳು ಇದರ ಸೌಲಭ್ಯವನ್ನು ಹೊಂದಿಕೊಳ್ಳಲು hಣಣಠಿs://sಛಿhoಟಚಿಡಿshiಠಿs.gov.iಟಿ ಅಥವಾ ತಿತಿತಿ.ಜisಚಿbiಟiಣಥಿಚಿಜಿಜಿಚಿiಡಿs.gov.iಟಿ ರಲ್ಲಿ ಅರ್ಜಿಗಳನ್ನು ಸಲ್ಲಿಸಬೇಕಾಗಿರುತ್ತದೆ. ಹೆಚ್ಚಿನ ಮಾಹಿತಿಗೆ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಮಡಿಕೇರಿ, ವಿಕಲಚೇತನರ ಸಹಾಯವಾಣಿ ದೂರವಾಣಿ ಸಂಖ್ಯೆ;08272-222830ನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಅವರು ತಿಳಿಸಿದ್ದಾರೆ.

ವಿದ್ಯಾರ್ಥಿ ವೇತನಕ್ಕೆ

ಪ್ರಸಕ್ತ ಸಾಲಿಗೆ ರಾಜ್ಯದ ಎಲ್ಲಾ ಇಲಾಖೆಗಳ ವಿದ್ಯಾರ್ಥಿ ವೇತನ ಕಾರ್ಯಕ್ರಮವನ್ನು ಅನುಷ್ಠಾನಗೊಳಿಸಲು ಏಕೀಕೃತ ರಾಜ್ಯ ವಿದ್ಯಾರ್ಥಿ ವೇತನ ತಂತ್ರಾಂಶವನ್ನು ಅಭಿವೃದ್ಧಿಪಡಿಸಲಾಗಿದೆ. ಅದರಂತೆ ಸೋಮವಾರಪೇಟೆ ತಾಲೂಕು ವ್ಯಾಪ್ತಿಗೆ ಬರುವ ಪರಿಶಿಷ್ಟ ಜಾತಿ ವಿದ್ಯಾರ್ಥಿಗಳು hಣಣಠಿ://ssಠಿ.ಞಚಿಡಿಟಿಚಿಣಚಿಞಚಿ.gov.iಟಿ ರ ತಂತ್ರಾಂಶದಲ್ಲಿ ಸಮಾಜ ಕಲ್ಯಾಣ ಇಲಾಖೆ/ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯನ್ನು ಆಯ್ಕೆ ಮಾಡಿ ವಿದ್ಯಾರ್ಥಿಯ ಎಸ್.ಎ.ಟಿ.ಎಸ್-ಐ.ಡಿ(ಸಂಬಂಧಪಟ್ಟ ಶಾಲೆಗಳಿಂದ), ಪೋಷಕರ ಮೊಬೈಲ್ ಸಂಖ್ಯೆ, ವಿದ್ಯಾರ್ಥಿಯ ಆಧಾರ್ ಸಂಖ್ಯೆ/ಇ.ಐ.ಡಿ ಸಂಖ್ಯೆ ಹಾಗೂ ಆಧಾರ್/ ಇ.ಐ.ಡಿ ಯಲ್ಲಿ ನಮೂದಿಸಿರುವಂತೆ ಹೆಸರು, ಪೋಷಕರ ಆಧಾರ್ ಸಂಖ್ಯೆ/ಇ.ಐ.ಡಿ ಸಂಖ್ಯೆ ಹಾಗೂ ಆಧಾರ್/ ಇ.ಐ.ಡಿ ಯಲ್ಲಿ ನಮೂದಿಸಿರುವಂತೆ ಹೆಸರು, ವಿದ್ಯಾರ್ಥಿಯ ಹೆಸರಿನಲ್ಲಿರುವ ಬ್ಯಾಂಕ್‍ಪಾಸ್ ಪುಸ್ತಕ, ವಿದ್ಯಾರ್ಥಿಯ ಹೆಸರಿನಲ್ಲಿ ನೀಡಲಾದ ಗಣಕೀಕೃತ ಜಾತಿ ಮತ್ತು ಆದಾಯ ಪ್ರಮಾಣ ಪತ್ರಗಳು, ಈಗಾಗಲೇ ವಿದ್ಯಾರ್ಥಿ ವೇತನ ಪಡೆಯುತ್ತಿದ್ದಲ್ಲಿ ಇ-ಪಾಸ್/ ಎನ್‍ಎಸ್‍ಪಿ/ಎಸ್‍ಎಮ್‍ಐಎಸ್ ಐಡಿ ನೋಂದಣಿ ಸಂಖ್ಯೆ, ವಸತಿ ನಿಲಯಾರ್ಥಿಯಾಗಿದ್ದಲ್ಲಿ ವಸತಿ ನಿಲಯ ನಿರ್ವಹಣೆ ತಂತ್ರಾಂಶದಲ್ಲಿ ನೊಂದಣಿ ಸಂಖ್ಯೆ ಈ ದಾಖಲೆಗಳೊಂದಿಗೆ ಅರ್ಜಿಯನ್ನು ಸಲ್ಲಿಸುವುದು.

ಅರ್ಜಿ ಸಲ್ಲಿಸುವಾಗ ಗೊಂದಲವಾದಲ್ಲಿ ತಂತ್ರಾಂಶದಲ್ಲಿ ನೀಡಿರುವ ಸಹಾಯವಾಣಿಗೆ ಕರೆಮಾಡುವದು. ಹೆಚ್ಚಿನ ಮಾಹಿತಿಗಾಗಿ ಕಚೇರಿ ದೂರವಾಣಿ ಸಂಖ್ಯೆ 9480843156/ 08276-281115 ನ್ನು ಸಂಪರ್ಕಿಸಬಹುದು ಎಂದು ಸೋಮವಾರಪೇಟೆ ತಾಲೂಕಿನ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.