ಮಡಿಕೇರಿ, ಸೆ. 16: ಡಾ. ಬಿ.ಆರ್ ಅಂಬೇಡ್ಕರ್ ಅಭಿವೃದ್ಧಿ ನಿಗಮವು, 2018-19ನೇ ಸಾಲಿಗೆ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ಜನರ ಆರ್ಥಿಕ ಅಭಿವೃದ್ಧಿಗಾಗಿ ಉದ್ಯಮ ಶೀಲತಾ ಅಭಿವೃದ್ಧಿ ಯೋಜನೆ ಹಾಗೂ ಮೈಕ್ರೋ ಕ್ರೆಡಿಟ್ ಯೋಜನೆಗಳಡಿಯಲ್ಲಿ (ಮಹಿಳಾ ಸ್ವ ಸಹಾಯ ಗುಂಪುಗಳಿಗೆ) ಫಲಾಪೇಕ್ಷಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿಗಳನ್ನು ಸಲ್ಲಿಸಲು ಅಕ್ಟೋಬರ್ 12 ಕೊನೆಯ ದಿನಾಂಕ ಆಗಿರುತ್ತದೆ. ಉದ್ಯಮ ಶೀಲತಾ ಅಭಿವೃದ್ಧಿ ಯೋಜನೆಗಳಡಿ ಸೌಲಭ್ಯ ಪಡೆಯಲು ಅರ್ಜಿದಾರರು ಪರಿಶಿಷ್ಟ ಜಾತಿಗೆ ಸೇರಿದವರಾಗಿರಬೇಕು ಹಾಗೂ ರಾಜ್ಯದ ನಿವಾಸಿಯಾಗಿರಬೇಕು. ಆರ್.ಡಿ. ಸಂಖ್ಯೆ ಇರುವ ತಹಶೀಲ್ದಾರ್ರಿಂದ ಪಡೆದಿರುವ ಜಾತಿ ಪ್ರಮಾಣ ಪತ್ರದ ಪ್ರತಿ ಲಗತ್ತಿಸಬೇಕು). ಅರ್ಜಿದಾರರ ಕುಟುಂಬದ ವಾರ್ಷಿಕ ವರಮಾನವು ಗ್ರಾಮೀಣ ಪ್ರದೇಶವಾದಲ್ಲಿ ರೂ. 1,50,000 ಹಾಗೂ ನಗರ ಪ್ರದೇಶವಾದಲ್ಲಿ ರೂ. 2 ಲಕ್ಷ ಮಿತಿಯೊಳಗಿರಬೇಕು.
ಅರ್ಜಿದಾರರು 18 ವರ್ಷಕ್ಕೆ ಮೇಲ್ಪಟ್ಟಿರಬೇಕು (ಆಧಾರ್ ಕಾರ್ಡ್ ಕಡ್ಡಾಯವಾಗಿ ಲಗತ್ತಿಸಿರಬೇಕು), ಅರ್ಜಿದಾರರು ಅಥವಾ ಅವರ ಕುಟುಂಬದವರು ಈ ಹಿಂದೆ ನಿಗಮದಿಂದ ಯಾವದೇ ಸೌಲಭ್ಯ ಪಡೆದಿರಬಾರದು ಮತ್ತು ಸರ್ಕಾರಿ, ಅರೆ ಸರ್ಕಾರಿ ಸಂಸ್ಥೆಯಲ್ಲಿ ನೌಕರಿಯಲ್ಲಿರಬಾರದು. ವಾಹನಗಳಿಗೆ ಸೌಲಭ್ಯ ಪಡೆಯಲು ಫಲಾಪೇಕ್ಷಿಗಳು ಡ್ರೈವಿಂಗ್ ಲೈಸೆನ್ಸ್ನೊಂದಿಗೆ ಬ್ಯಾಡ್ಜ್ನ್ನು ಹೊಂದಿರಬೇಕು.
ಉದ್ಯಮ ಶೀಲತಾ ಅಭಿವೃದ್ಧಿ ಯೋಜನೆಯಡಿ ಸ್ವಯಂ ಉದ್ಯೋಗಕ್ಕಾಗಿ ಸಣ್ಣ ಕೈಗಾರಿಕೆ, ಸೇವಾ ಘಟಕಗಳು, ವ್ಯಾಪಾರ-ವಾಣಿಜ್ಯ, ಸಾರಿಗೆ ಉದ್ದೇಶಗಳಿಗೆ ರೂ. 5 ಲಕ್ಷಗಳವರೆಗಿನ ಘಟಕಗಳಿಗೆ ಶೇ. 70 ರಷ್ಟು (ಗರಿಷ್ಠ ರೂ. 3.50 ಲಕ್ಷ) ಸಹಾಯಧನ ರೂ. 5 ಲಕ್ಷದಿಂದ ರೂ. 10 ಲಕ್ಷದವರೆಗಿನ ಘಟಕಗಳಿಗೆ ಶೇ. 60 ರಷ್ಟು ಸಹಾಯಧನ (ಗರಿಷ್ಠ ರೂ. 5 ಲಕ್ಷ) ಮತ್ತು ರೂ. 10 ಲಕ್ಷಗಳವರೆಗಿನ ಘಟಕಗಳಿಗೆ ಶೇ. 50 ರಷ್ಟು ಸಹಾಯಧನ (ಗರಿಷ್ಠ ರೂ. 5 ಲಕ್ಷ ಸಹಾಯಧನ) ನಿಗಮದಿಂದ ಮಂಜೂರು ಮಾಡಲು ಅವಕಾಶವಿರುತ್ತದೆ. ಘಟಕ ವೆಚ್ಚದ ಉಳಿದ ಭಾಗವನ್ನು ಸಾಲವನ್ನಾಗಿ ಅರ್ಜಿದಾರರು ಸೇವಾ ವ್ಯಾಪ್ತಿಯ ಬ್ಯಾಂಕ್ಗಳಿಂದ ಮಂಜೂರಾತಿ ಪಡೆಯುವ ಷರತ್ತಿಗೆ ಒಳಪಟ್ಟು ಸಹಾಯಧನವನ್ನು ಮಂಜೂರು ಮಾಡಲಾಗುತ್ತದೆ.
ಜಿಲ್ಲಾ ಅಂಗವಿಕಲ ಕಲ್ಯಾಣಾಧಿಕಾರಿಗಳ ಕಚೇರಿಯಲ್ಲಿ ಈಗಾಗಲೇ ನೋಂದಣಿ ಮಾಡಿಕೊಂಡಿರುವ ಪರಿಶಿಷ್ಟ ಜಾತಿಯ ಅಂಗವಿಕಲರು ಅರ್ಜಿ ಸಲ್ಲಿಸಿದ್ದಲ್ಲಿ ನಿಗದಿಪಡಿಸಿದ ಒಟ್ಟು ಗುರಿಯಲ್ಲಿ ಶೇ. 5 ರಷ್ಟು ಮೀಸಲಾತಿಯನ್ನು ನೀಡಿ ಸೌಲಭ್ಯ ಒದಗಿಸಲಾಗುವದು. ಅರ್ಜಿದಾರರು ಮಧ್ಯವರ್ತಿಗಳನ್ನು ಸಂಪರ್ಕಿಸದಿರುವಂತೆ ಕೋರಲಾಗಿದೆ.
ಫಲಾಪೇಕ್ಷಿಯು ಅರ್ಜಿಯೊಂದಿಗೆ ಸಲ್ಲಿಸಬೇಕಾದ ದಾಖಲಾತಿಗಳು: ಇತ್ತಿಚೀನ ಫೋಟೋ, ಜಾತಿ ಪ್ರಮಾಣ ಪತ್ರ, ಆದಾಯ ಪ್ರಮಾಣ ಪತ್ರ, ಪಡಿತರ ಚೀಟಿ, ಆಧಾರ್ ಕಾರ್ಡ್, ಗುರುತಿನ ಕಾರ್ಡ್, ಬ್ಯಾಂಕ್ ಪಾಸ್ ಪುಸ್ತಕ ಪ್ರತಿ, ಯೋಜನಾ ವರದಿ, ದರಪಟ್ಟಿ (ಅನ್ವಯವಾಗುವ ಘಟಕಗಳಿಗೆ), ವಾಹನವಾಗಿದ್ದಲ್ಲಿ ಕಡ್ಡಾಯವಾಗಿ ಪ್ರಾದೇಶಿಕ ಸಾರಿಗೆ ಇಲಾಖೆಯಿಂದ ಪಡೆದ ವಾಹನ ಚಾಲನ ಪರವಾನಗಿ ಮತ್ತು ಬ್ಯಾಡ್ಜ್ನ ಪ್ರತಿ.
ಮೈಕ್ರೋ ಕ್ರೆಡಿಟ್ ಯೋಜನೆಯಡಿ ಸ್ವ ಸಹಾಯ ಮಹಿಳಾ ಗುಂಪುಗಳು ಪ್ರತಿನಿಧಿ-1 ಮತ್ತು 2ರ ಬ್ಯಾಂಕ್ ಖಾತೆ ಹಾಗೂ ಸಭೆಗಳು ನಡೆಸಿರುವ ಬಗ್ಗೆ ಸಭಾ ನಡವಳಿಗಳ ಪ್ರತಿಗಳನ್ನು ದೃಢೀಕರಿಸಿ ಸಲ್ಲಿಸಬೇಕು. ಈ ಯೋಜನೆಯಡಿ ಗುಂಪು ಚಟುವಟಿಕೆಗಳಡಿ ಉತ್ಪಾದನೆ ಮತ್ತು ಸೇವಾ ಘಟಕಗಳಿಗೆ ರೂ. 2.50 ಲಕ್ಷಗಳಿಗೆ ಅರ್ಥಿಕ ಸಹಾಯ ಮಾಡಲಾಗುವದು (ಕನಿಷ್ಟ 10 ಸದಸ್ಯರ ಗಂಪು ಇರಬೇಕು). ಘಟಕ ವೆಚ್ಚದಲ್ಲಿ ಸಹಾಯಧನ ಮತ್ತು ಸಾಲದ ಮೊತ್ತವನ್ನು ನಿಗಮದಿಂದಲೇ ನೀಡಲಾಗುವದು. ಸಾಲದ ಹಣಕ್ಕೆ ಬಡ್ಡಿ ವಾರ್ಷಿಕ ಶೇ.4 ರಷ್ಟಿದ್ದು, ಸಾಲದ ಹಣವನ್ನು ಬಡ್ಡಿ ಸಮೇತವಾಗಿ 36 ಮಾಸಿಕ ಸಮಕಂತುಗಳಲ್ಲಿ ನಿಗಮಕ್ಕೆ ಮರುಪಾವತಿ ಮಾಡಬೇಕು.
ಮೈಕ್ರೋ ಕ್ರೆಡಿಟ್ ಯೋಜನೆಗೆ ಸಲ್ಲಿಸಬೇಕಾದ ದಾಖಲಾತಿಗಳು: ಪಾಸ್ ಪೋರ್ಟ್ ಅಳತೆಯ ಭಾವಚಿತ್ರ, ಜಾತಿ ಪ್ರಮಾಣ ಪತ್ರ, ಆದಾಯ ಪ್ರಮಾಣ ಪತ್ರ, ಗುರುತಿನ ಚೀಟಿ, ಪಡಿತರ ಚೀಟಿ, ಆಧಾರ್ ಕಾರ್ಡ್, ಸಂಘ ನೋಂದಾಣಿಯಾಗಿರುವ ಪತ್ರ, ಸಬೆಯ ನಡವಳಿ, ಫಲಾಪೇಕ್ಷಿಯ ಬ್ಯಾಂಕ್ ಪಾಸ್ ಪುಸ್ತಕ, ಸಂಘದ ಬ್ಯಾಂಕ್ ಪುಸ್ತಕ.
ಈ ಎಲ್ಲಾ ಯೋಜನೆಗಳಲ್ಲಿ ಸಾಲ ಸೌಲಭ್ಯ ಪಡೆಯಲು ಜಿಲ್ಲಾ ಕಚೇರಿಯಿಂದ ಉಚಿತವಾಗಿ ಅರ್ಜಿಗಳನ್ನು ಪಡೆದು ದ್ವಿ ಪ್ರತಿಯಲ್ಲಿ ದಾಖಲಾತಿಗಳೊಂದಿಗೆ ಜಿಲ್ಲಾ ಕಚೇರಿಗೆ ಅಕ್ಟೋಬರ್ 12 ರೊಳಗೆ ಸಲ್ಲಿಸುವದು. ನಂತರ ಸಲ್ಲಿಸಿದ ಅರ್ಜಿಗಳನ್ನು ಸ್ವೀಕರಿಸಲಾಗುವದಿಲ್ಲ ಹಾಗೂ ಆಯ್ಕೆಗೆ ಪರಿಗಣಿಸುವದಿಲ್ಲ. ಅರ್ಜಿಗಳನ್ನು ಸಹಾಯಕ ನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ, ಸೋಮವಾರಪೇಟೆ, ವೀರಾಜಪೇಟೆ ತಾಲೂಕು ಇಲ್ಲಿ ಉಚಿತವಾಗಿ ಪಡೆಯಬಹುದಾಗಿದೆ. ಹೆಚ್ಚಿನ ಮಾಹಿತಿಗೆ ಜಿಲ್ಲಾ ವ್ಯವಸ್ಥಾಪಕರು, ಡಾ. ಬಿ.ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮ, ಹೊಸ ಬಡಾವಣೆ, ರೇಸ್ ಕೋರ್ಸ್ ಮಡಿಕೇರಿ, ಕೊಡಗು ಜಿಲ್ಲೆ ಇವರನ್ನು ಹಾಗೂ ದೂರವಾಣಿ ಸಂಖ್ಯೆ 08272-228857 ನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದಾರೆ.
ವಿದ್ಯಾರ್ಥಿಗಳಿಗೆ ಪ್ರವೇಶ ನೀಡಲು
ಪ್ರಸಕ್ತ (2018-19) ಸಾಲಿಗೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಮೊರಾರ್ಜಿ ದೇಸಾಯಿ ವಸತಿ ಶಾಲೆ ಖ್ಯಾತೆ ಗ್ರಾಮ, ಕೊಡ್ಲಿಪೇಟೆ ಮತ್ತು ಆರ್ಜಿ ಗ್ರಾಮ, ವೀರಾಜಪೇಟೆ ಇಲ್ಲಿ ಖಾಲಿ ಇರುವ 6ನೇ ತರಗತಿಯಿಂದ 10ನೇ ತರಗತಿಯವರೆಗಿನ ತರಗತಿಗಳಿಗೆ ಪ್ರವೇಶ ಪಡೆಯಲು ನೆರೆ ಹಾವಳಿ ಮತ್ತು ಪ್ರಕೃತಿ ವಿಕೋಪದಿಂದ ಸಂತ್ರಸ್ತರಾದ ಕುಟುಂಬದ ಸದಸ್ಯರಿಂದ ಇತರ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ಪ್ರವೇಶ ನೀಡಲು ಅರ್ಜಿ ಆಹ್ವಾನಿಸಲಾಗಿದೆ.
ಅರ್ಹ ವಿದ್ಯಾರ್ಥಿಗಳು ಪ್ರವೇಶಕ್ಕೆ ತಾ. 22 ರೊಳಗೆ ಜಿಲ್ಲಾ ಅಧಿಕಾರಿ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಮೌಲಾನ ಅಜಾದ್ ಭವನ, ಗ್ರಾಮಾಂತರ ಪೊಲೀಸ್ ಠಾಣೆ ಹತ್ತಿರ, ಮಡಿಕೇರಿ, ಪ್ರಾಂಶುಪಾಲರು, ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ ಖ್ಯಾತೆ ಗ್ರಾಮ, ಕೊಡ್ಲಿಪೇಟೆ ಮತ್ತು ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ ಆರ್ಜಿ ಗ್ರಾಮ, ವೀರಾಜಪೇಟೆ ರವರಿಗೆ ಅರ್ಜಿ ಸಲ್ಲಿಸಬಹುದು.
ಅರ್ಜಿ ನಮೂನೆಗಳನ್ನು ಜಿಲ್ಲಾ ಅಧಿಕಾರಿ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಮೌಲಾನ ಅಜಾದ್ ಭವನ, ಗ್ರಾಮಾಂತರ ಪೊಲೀಸ್ ಠಾಣೆ ಹತ್ತಿರ, ಮಡಿಕೇರಿ, ಪ್ರಾಂಶುಪಾಲರು, ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ ಖ್ಯಾತೆ ಗ್ರಾಮ, ಕೊಡ್ಲಿಪೇಟೆ ಮತ್ತು ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ ಆರ್ಜಿ ಗ್ರಾಮ, ವೀರಾಜಪೇಟೆರವರಿಂದ ಪಡೆಯಬಹುದು. ನಿಗದಿತ ಅರ್ಜಿಯೊಂದಿಗೆ ಜಾತಿ, ಆದಾಯ ಪ್ರಮಾಣ ಪತ್ರ, ಹಿಂದಿನ ಶಾಲೆಯ ಅಂಕಪಟ್ಟಿ, ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿರುವ ದೃಢೀಕರಣ ಪತ್ರ ಸಂಬಂಧಪಟ್ಟ ಮುಖ್ಯೋಪಾಧ್ಯಾಯರಿಂದ ಹಾಗೂ ನೆರೆ ಹಾವಳಿ ಮತ್ತು ಪ್ರಕೃತಿ ವಿಕೋಪದಿಂದ ನಿರಾಶ್ರಿತರಾಗಿರುವ ಬಗ್ಗೆ ಸಂಬಂಧಪಟ್ಟ ತಹಶೀಲ್ದಾರರ ದೃಢೀಕರಣದೊಂದಿಗೆ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗೆ ಜಿಲ್ಲಾ ಅಧಿಕಾರಿಯವರ ಕಚೇರಿ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಮಡಿಕೇರಿ 08272-225528, 9481430309, ಪ್ರಾಂಶುಪಾಲರು, ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ, ಖ್ಯಾತೆ ಗ್ರಾಮ, ಕೊಡ್ಲಿಪೇಟೆ-8050818437 ಹಾಗೂ ಪ್ರಾಂಶುಪಾಲರು, ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ, ಆರ್ಜಿ ಗ್ರಾಮ, ವೀರಾಜಪೇಟೆ-9741209826 ನ್ನು ಸಂಪರ್ಕಿಸಬಹುದು ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ತಿಳಿಸಿದ್ದಾರೆ.