ನಾಪೆÇೀಕ್ಲು, ಸೆ. 16: ಕೊಡವ ನ್ಯಾಷನಲ್ ಕೌನ್ಸಿಲ್ ವತಿಯಿಂದ ಕೇಂದ್ರ ಸಚಿವ ಡಾ. ಸುಬ್ರಮಣ್ಯನ್ ಸ್ವಾಮಿ ಅವರ 79ನೇ ಹುಟ್ಟು ಹಬ್ಬದ ಪ್ರಯುಕ್ತ ಕಕ್ಕಬ್ಬೆ ಪಾಡಿ ಶ್ರೀ ಇಗ್ಗುತ್ತಪ್ಪ ದೇವಳದಲ್ಲಿ ವಿಶೇಷ ಪೂಜೆ ಸಲ್ಲಿಸಿ ಪ್ರಾರ್ಥಿಸಲಾಯಿತು.

ಸಿಎನ್‍ಸಿಯ ಅಧ್ಯಕ್ಷ ನಂದಿನೆರವಂಡ ನಾಚಪ್ಪ ನೇತೃತ್ವದಲ್ಲಿ ನಡೆದ ಪೂಜೆಯಲ್ಲಿ ಕಲಿಯಂಡ ಪ್ರಕಾಶ್, ಅಪ್ಪಚ್ಚಿರ ರೆಮ್ಮಿ ನಾಣಯ್ಯ, ಕಾಟುಮಣಿಯಂಡ ಉಮೇಶ್, ಅರೆಯಡ ಗಿರೀಶ್, ಲೆಫ್ಟಿನೆಂಟ್ ಕರ್ನಲ್ ಬಿ.ಎಂ.ಪಾರ್ವತಿ, ಚಂಬಂಡ ಜನತ್, ಬೇಪುಡಿಯಂಡ ಬಿದ್ದಪ್ಪ, ದಿನು, ಬೊಪ್ಪಂಡ ಬೊಳ್ಳಮ್ಮ ನಾಣಯ್ಯ, ಬಾಚಮಂಡ ಬೆಲ್ಲು ಪೂವಪ್ಪ, ಮಣವಟ್ಟಿರ ಸ್ವರೂಪ್, ನಂದಾ ಇದ್ದರು.