ಕೂಡಿಗೆ, ಸೆ. 16: ಸಮೀಪದ ಹೆಬ್ಬಾಲೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗ್ರಾಮಸ್ಥರಿಗೆ ಅನುಕೂಲವಾಗುವಂತೆ ಪಂಚಾಯಿತಿಯ ಆವರಣದಲ್ಲಿ ಆಧಾರ್ ಕಾರ್ಡ್ ತಿದ್ದುಪಡಿ ಕೇಂದ್ರವನ್ನು ಪ್ರಾರಂಭಿಸಿದ್ದು, ಗ್ರಾಮ ಪಂಚಾಯಿತಿ ಅಧ್ಯಕ್ಷೆ ಲತಾ ಚಾಲನೆ ನೀಡಿದರು.
ಗ್ರಾಮ ಪಂಚಾಯಿತಿಯಲ್ಲಿ ಆಧಾರ್ ಕಾರ್ಡ್ ತಿದ್ದುಪಡಿ ಕೇಂದ್ರ ಆರಂಭಿಸಿರುವದು ಸಾರ್ವಜನಿಕರಿಗೆ ಬಹಳ ಅನುಕೂಲವಾಗಿದೆ. ತಮ್ಮ ಆಧಾರ್ ಕಾರ್ಡ್ನಲ್ಲಿ ಇರುವ ನ್ಯೂನತೆಗಳನ್ನು ಸರಿಪಡಿಸಿಕೊಳ್ಳಲು ಅನೇಕ ಕಷ್ಟಗಳನ್ನು ಪಡಬೇಕಾಗಿತ್ತು. ಈ ಆಧಾರ್ ಕಾರ್ಡ್ ತಿದ್ದುಪಡಿಯ ಕೇಂದ್ರ ಆರಂಭವಾಗಿರುವದರಿಂದ ಸಾಕಷ್ಟು ಒಳ್ಳೆಯದಾಗಿದೆ ಎಂದರು.
ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ರಾಕೇಶ್ ಮಾತನಾಡಿ, ಆಧಾರ್ ಕಾರ್ಡ್ನ ನ್ಯೂನತೆಯ ಬದಲಾವಣೆ ಮಾಡಿಸಿಕೊಳ್ಳುವ ಬಗ್ಗೆ, ಹುಟ್ಟಿದ ದಿನಾಂಕ, ವಿಳಾಸ ಬದಲಾವಣೆ, ತಮ್ಮ ಹೆಸರು ಅದಲು ಬದಲಾಗಿರುವದನ್ನು ಸರಿಪಡಿಸಿಕೊಳ್ಳಲು ಗ್ರಾಮ ಪಂಚಾಯಿತಿ ಕೇಂದ್ರದಲ್ಲಿ ಮಾಡಿಕೊಡಲಾಗುವದು ಎಂದು ಸಭೆಯಲ್ಲಿ ತಿಳಿಸಿದರು.
ಈ ಸಂದರ್ಭ ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆ ಪದ್ಮ, ಸದಸ್ಯರಾದ ವಿಜಯ್, ಚೇತನ್, ಸರೋಜಮ್ಮ, ಗ್ರಾಮಸ್ಥರು ಹಾಗೂ ಮತ್ತಿತರರು ಇದ್ದರು.