ಸೋಮವಾರಪೇಟೆ,ಸೆ.16: ಇಲ್ಲಿನ ದೇವಾಂಗ ಸಂಘದ ವತಿಯಿಂದ ಶಿವಾಜಿ ರಸ್ತೆಯ ದೇವಾಂಗ ಸಮಾಜದ ಸಭಾಂಗಣದಲ್ಲಿ ಪ್ರತಿಷ್ಠಾಪಿಸಿದ್ದ ಗೌರಿ ಗಣಪತಿ ಉತ್ಸವ ಮೂರ್ತಿಗಳನ್ನು ಮೆರವಣಿಗೆ ಮೂಲಕ ಕೊಂಡೊಯ್ದು ಆನೆಕೆರೆಯಲ್ಲಿ ವಿಸರ್ಜಿಸಲಾಯಿತು. ಅರ್ಚಕ ಸುಬ್ರಮಣ್ಯ ಭಟ್ ಅವರು ಉತ್ಸವ ಮೂರ್ತಿಗಳಿಗೆ ವಿಶೇಷ ಪೂಜೆ ನೆರವೇರಿಸಿದರು. ಈ ಸಂದರ್ಭ ದೇವಾಲಯ ಸಮಿತಿಯ ಅಡಳಿತ ಮಂಡಳಿ ಪದಾಧಿಕಾರಿಗಳು, ಸಮಾಜಬಾಂಧವರು ಹಾಗೂ ಸಾರ್ವಜನಿಕರು ಪಾಲ್ಗೊಂಡಿದ್ದರು.