ಸಿದ್ದಾಪುರ, ಸೆ. 16: ಮಾದಕವಸ್ತುಗಳಿಂದ ಸಾರ್ವಜನಿಕರಿಗೆ ಆಗುತ್ತಿರುವ ಸಮಸ್ಯೆಗಳ ಬಗ್ಗೆ ಜಾಗೃತಿ ಅರಿವು ಶಿಬಿವು ಗ್ರಾ.ಪಂ ಸಭಾಂಗಣದಲ್ಲಿ ನಡೆಯಿತ್ತು.

ಸಿದ್ದಾಪುರ ಪೊಲೀಸ್ ಠಾಣಾಧಿಕಾರಿ ಸುಬ್ರಮಣ್ಯ ಮಾದಕವಸ್ತುಗಳಿಂದ ಆಗುವ ಸಮಸ್ಯೆಯ ಬಗ್ಗೆ ತಿಳಿಸಿದರು. ಮಾದಕ ವಸ್ತುಗಳಿಂದ ವಿದ್ಯಾರ್ಥಿಗಳು ಹಾಗೂ ನಾಗರಿಕರು ದೂರವಿರಬೇಕು ಮತ್ತು ಪೊಷಕರು ತಮ್ಮ ಮಕ್ಕಳನ್ನು ನೋಡಿಕೊಳ್ಳಬೇಕು ಎಂದರು. ಈ ಸಂದರ್ಭ ಸಿದ್ದಾಪುರ ಗ್ರಾ.ಪಂ ಅಭಿವೃದ್ಧಿ ಅಧಿಕಾರಿ ವಿಶ್ವನಾಥ್, ಸಹಾಯಕ ಠಾಣಾಧಿಕಾರಿ ವಸಂತ್ ಕುಮಾರ್, ಸೇರಿದಂತೆ ಗ್ರಾಮಸ್ಥರು ಇದ್ದರು.