ಕೂಡಿಗೆ, ಸೆ. 16: ಹೆಬ್ಬಾಲೆ ಗ್ರಾಮ ಪಂಚಾಯಿತಿ ಆವರಣದಲ್ಲಿ ವಿಶೇಷ ಆಹಾರ ಕಿಟ್ ಅನ್ನು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಲತಾ ಅವರು ಬಿಪಿಎಲ್ ಕಾರ್ಡುದಾರರಿಗೆ ವಿತರಿಸಿದರು.
ನಂತರ ಮಾತನಾಡಿದ ಅವರು, ಕೊಡಗಿನಲ್ಲಿ ಆದ ಅತಿವೃಷ್ಟಿಯ ಹಿನ್ನೆಲೆ ಬಿಪಿಎಲ್ ಕಾರ್ಡುದಾರರಿಗೆ ವಿಶೇಷ ಆಹಾರ ಕಿಟ್ ಅನ್ನು ನೀಡಲಾಗುತ್ತಿದ್ದು, ಅದರಂತೆ ಹೆಬ್ಬಾಲೆಯಲ್ಲಿ 842 ಬಿಪಿಎಲ್ ಕಾರ್ಡುದಾರರಿಗೆ ವಿತರಿಸಲಾಗಿದೆ ಎಂದರು.
ಈ ಸಂದರ್ಭ ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆ ಪದ್ಮ, ಸದಸ್ಯರಾದ ಸರೋಜಮ್ಮ, ಪ್ರಮೀಳಾ, ಮಂಜುಳಾ, ವಿಜಯ್, ಸಚಿನ್ ಹಾಗೂ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ರಾಕೇಶ್ ಉಪಸ್ಥಿತರಿದ್ದರು.