ಸೋಮವಾರಪೇಟೆ, ಸೆ. 16: ಪೌಷ್ಟಿಕಾಂಶದಿಂದ ಕೂಡಿದ ಹಸಿರು ತರಕಾರಿಗಳನ್ನು ಹೆಚ್ಚಾಗಿ ಉಪಯೋಗಿ ಸುವದರಿಂದ ಸುದೀರ್ಘಕಾಲ ಉತ್ತಮ ಆರೋಗ್ಯದಿಂದ ಜೀವನ ಸಾಗಿಸಬಹುದೆಂದು ಪಟ್ಟಣ ಪಂಚಾಯಿತಿ ಮಾಜಿ ಅಧ್ಯಕ್ಷೆ ನಳಿನಿ ಗಣೇಶ್ ಅಭಿಪ್ರಾಯಿಸಿದರು.
ಪಟ್ಟಣದ ವೆಂಕಟೇಶ್ವರ ಬ್ಲಾಕ್ ಅಂಗನವಾಡಿ ಕೇಂದ್ರದಲ್ಲಿ ಪೌಷ್ಟಿಕಾಂಶ ಆಹಾರ ಸಪ್ತಾಹದ ಅಂಗವಾಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು ಆರೋಗ್ಯ ಇಲಾಖೆಯ ಸಹಯೋಗದಲ್ಲಿ ಆಯೋಜಿಸಿದ್ದ ಪೋಷಣ್ ಅಭಿಯಾನ್ ಕಾರ್ಯಕ್ರಮ ವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಬಹುದೆಂದರು. ಪೌಷ್ಟಿಕಾಂಶಯುಕ್ತ ಆಹಾರ ಪದಾರ್ಥಗಳ ಬಗ್ಗೆ ಆರೋಗ್ಯ ಕಾರ್ಯಕರ್ತೆ ಅನಿತಾ ಮಾತನಾಡಿ, ಇಂದಿಗೂ ಕೆಲವರಲ್ಲಿರುವ ಮೂಢನಂಬಿಕೆಯಿಂದಾಗಿ ಗರ್ಭಿಣಿ, ಬಾಣಂತಿಯರಿಗೆ ಕೆಲವು ಖನಿಜಾಂಶ ಗಳಿಂದ ಕೂಡಿದ ಪೌಷ್ಟಿಕಾಂಶವುಳ್ಳ ತರಕಾರಿ, ಪದಾರ್ಥಗಳನ್ನು ನೀಡಲು ನಿರಾಕರಿಸುತ್ತಿದ್ದಾರೆ. ಇದರಿಂದ ಭವಿಷ್ಯದಲ್ಲಿ ತಾಯಿ ಹಾಗೂ ಮಗುವಿನ ಬೆಳವಣಿಗೆಯಲ್ಲಿ ಮಾರಕ ಪರಿಣಾಮಗಳು ಬೀರುತ್ತದೆ ಎಂದರು.
ಮತ್ತೋರ್ವ ಆರೋಗ್ಯ ಕಾರ್ಯಕರ್ತೆ ದಿವ್ಯ ಅವರು ಗರ್ಭಿಣಿ, ಬಾಣಂತಿ ಹಾಗೂ ಮಗುವಿಗೆ ನೀಡುವ ಚುಚ್ಚುಮದ್ದಿನ ಬಗ್ಗೆ ಮಾಹಿತಿ ನೀಡುತ್ತಾ, ಹೊಸದಾಗಿ “ಇಂದ್ರ ಧನುಷ್” ಯೋಜನೆ ಚಾಲ್ತಿಯಲ್ಲಿದ್ದು, ಇದನ್ನು ಸದುಪಯೋಗಪಡಿಸಿಕೊಳ್ಳಿ ಎಂದರು. ಅಂಗನವಾಡಿ ಕಾರ್ಯ ಕರ್ತೆ ತಾರಾ ಲೋಬೋ ಅವರು, ಪ್ರೋಟೀನ್, ಕೊಬ್ಬು, ಜೀವಸತ್ವಗಳು, ಖನಿಜ ಲವಣಗಳಿರುವ ಆಹಾರ ಪದಾರ್ಥಗಳ ಬಗ್ಗೆ ವಿವರಿಸಿದರು. ಕಾರ್ಯಕ್ರಮದಲ್ಲಿ ಗರ್ಭಿಣಿಯರು, ಬಾಣಂತಿಯರು, ಸ್ತ್ರೀಶಕ್ತಿ ಸಂಘದ ಸದಸ್ಯರುಗಳು ಪಾಲ್ಗೊಂಡಿದ್ದರು.