ಮಡಿಕೇರಿ, ಸೆ. 17: ಪ್ರಜಾಸತ್ಯ ದೈನಿಕ ವತಿಯಿಂದ ತಾ. 19 ರಂದು (ನಾಳೆ) ಇಲ್ಲಿನ ರೋಟರಿ ಸಭಾಂಗಣದಲ್ಲಿ ಬೆಳಿಗ್ಗೆ 9 ಗಂಟೆಯಿಂದ 1 ಗಂಟೆಯ ತನಕ ಪ್ರಕೃತಿ ವಿಕೋಪ ಸಂತ್ರಸ್ತರಿಗಾಗಿ ಉದ್ಯೋಗ ಮೇಳ ಏರ್ಪಡಿಸಲಾಗಿದೆ.

ಜಿಲ್ಲಾ ಉದ್ಯೋಗ ವಿನಿಮಯ ಅಧಿಕಾರಿ ಸಿ. ಜಗನ್ನಾಥ್ ಉದ್ಘಾಟನೆಯೊಂದಿಗೆ ಪತ್ರಿಕಾ ಸಂಪಾದಕ ಡಾ.ಬಿ.ಸಿ. ನವೀನ್ ಕುಮಾರ್ ಅಧ್ಯಕ್ಷತೆ ವಹಿಸಲಿದ್ದು, ‘ಶಕ್ತಿ’ ಪ್ರಧಾನ ಸಂಪಾದಕ ಜಿ. ರಾಜೇಂದ್ರ, ವಾರ್ತಾಧಿಕಾರಿ ಚಿನ್ನಸ್ವಾಮಿ ಹಾಗೂ ಸಾಹಿತಿ ನಾಗೇಶ್ ಕಾಲೂರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.