ಸೋಮವರಪೇಟೆ, ಸೆ. 17: ಭಾರೀ ಪ್ರಮಾಣದ ಪ್ರಕೃತಿ ವಿಕೋಪಕ್ಕೆ ತುತ್ತಾಗಿರುವ ಕೊಡಗಿನಲ್ಲಿ ಪರಿಹಾರ ಕಾರ್ಯಗಳನ್ನು ತ್ವರಿತಗೊಳಿಸಲು ಪ್ರತ್ಯೇಕ ಮಂಡಳಿ ರಚಿಸುವಂತೆ ರಾಜ್ಯ ಸರ್ಕಾರದ ಮೇಲೆ ಒತ್ತಡ ಹೇರಲಾಗುವದು ಎಂದು ಮಡಿಕೇರಿ ಕ್ಷೇತ್ರದ ಶಾಸಕ ಎಂ.ಪಿ. ಅಪ್ಪಚ್ಚು ರಂಜನ್ ತಿಳಿಸಿದ್ದಾರೆ.
ಸೋಮವಾರಪೇಟೆಯಲ್ಲಿರುವ ತಮ್ಮ ಕಚೇರಿಯಲ್ಲಿ ಮಾಧ್ಯಮದ ವರೊಂದಿಗೆ ಮಾತನಾಡಿದ ರಂಜನ್, ಕೊಡಗಿನ ಅಭಿವೃದ್ಧಿ ದೃಷ್ಟಿಯಿಂದ ಪ್ರತ್ಯೇಕವಾಗಿ ಕೊಡಗು ಪ್ರಕೃತಿ ವಿಕೋಪ ನಿಧಿ ಖಾತೆ ಆರಂಭಿಸಬೇಕು. ಇದರೊಂದಿಗೆ ಪರಿಹಾರ ಕಾರ್ಯ ಸುಗಮಗೊಳ್ಳಲು ಪ್ರತ್ಯೇಕ ಮಂಡಳಿ ರಚಿಸುವಂತೆ ರಾಜ್ಯ ಸರ್ಕಾರವನ್ನು ಒತ್ತಾಯಿಸಲಾಗುವದು ಎಂದರು.ಕೊಡಗು ಜಿಲ್ಲೆಯ ಸಂತ್ರಸ್ತರಿಗೆಂದೇ ರಾಜ್ಯ ಸರ್ಕಾರ ವಿಶೇಷ ಪ್ಯಾಕೇಜ್ ಒದಗಿಸಬೇಕು. ಕೊಡಗು ಜಿಲ್ಲೆಯ ಸಂತ್ರಸ್ತರಿಗೆ ನೆರವಾಗಲು ಹಲವಷ್ಟು ದಾನಿಗಳು ಮುಂದೆ ಬಂದಿದ್ದು, ಕೊಡಗಿಗೆ ಪ್ರತ್ಯೇಕ ನಿಧಿ ಸ್ಥಾಪಿಸುವಂತೆ ಮನವಿ ರಂಜನ್ ತಿಳಿಸಿದ್ದಾರೆ.
ಸೋಮವಾರಪೇಟೆಯಲ್ಲಿರುವ ತಮ್ಮ ಕಚೇರಿಯಲ್ಲಿ ಮಾಧ್ಯಮದ ವರೊಂದಿಗೆ ಮಾತನಾಡಿದ ರಂಜನ್, ಕೊಡಗಿನ ಅಭಿವೃದ್ಧಿ ದೃಷ್ಟಿಯಿಂದ ಪ್ರತ್ಯೇಕವಾಗಿ ಕೊಡಗು ಪ್ರಕೃತಿ ವಿಕೋಪ ನಿಧಿ ಖಾತೆ ಆರಂಭಿಸಬೇಕು. ಇದರೊಂದಿಗೆ ಪರಿಹಾರ ಕಾರ್ಯ ಸುಗಮಗೊಳ್ಳಲು ಪ್ರತ್ಯೇಕ ಮಂಡಳಿ ರಚಿಸುವಂತೆ ರಾಜ್ಯ ಸರ್ಕಾರವನ್ನು ಒತ್ತಾಯಿಸಲಾಗುವದು ಎಂದರು.
ಕೊಡಗು ಜಿಲ್ಲೆಯ ಸಂತ್ರಸ್ತರಿಗೆಂದೇ ರಾಜ್ಯ ಸರ್ಕಾರ ವಿಶೇಷ ಪ್ಯಾಕೇಜ್ ಒದಗಿಸಬೇಕು. ಕೊಡಗು ಜಿಲ್ಲೆಯ ಸಂತ್ರಸ್ತರಿಗೆ ನೆರವಾಗಲು ಹಲವಷ್ಟು ದಾನಿಗಳು ಮುಂದೆ ಬಂದಿದ್ದು, ಕೊಡಗಿಗೆ ಪ್ರತ್ಯೇಕ ನಿಧಿ ಸ್ಥಾಪಿಸುವಂತೆ ಮನವಿ ಮನೆಗಳಲ್ಲಿ ವಾಸಿಸಲು ಹೆದರುತ್ತಿದ್ದಾರೆ. ಇಂತಹ ಪರಿಸ್ಥಿತಿಯಲ್ಲಿ ನಾವು ಯಾರನ್ನೂ ಒತ್ತಾಯದಿಂದ ಒಕ್ಕಲೆಬ್ಬಿಸುವ ಪ್ರಯತ್ನ ಮಾಡುವದಿಲ್ಲ. ಗ್ರಾಮದಲ್ಲಿ ವಾಸಿಸಲು ಸಾಧ್ಯವಿಲ್ಲ ಎಂದು ಬರುವವರಿಗೆ ಪುನರ್ ವಸತಿ ಕಲ್ಪಿಸಿ ಕೊಡುತ್ತೇವೆ. ಗ್ರಾಮದಲ್ಲಿ ಕೃಷಿ ಚಟುವಟಿಕೆ ನಡೆಸಿಕೊಂಡು ಹೋಗ ಬಹುದು. ಆದರೆ ಬೆಟ್ಟ, ಗುಡ್ಡ ಕುಸಿತದಿಂದ ಸಾವಿರಾರು ಎಕರೆ ಜಮೀನು ಮಣ್ಣಿನಲ್ಲಿ ಮುಚ್ಚಿ ಹೋಗಿವೆ. ಅವುಗಳಲ್ಲಿ ಇನ್ನೂ 10-15ವರ್ಷ ಕೃಷಿ ಮಾಡಲು ಸಾಧ್ಯವಿಲ್ಲ. ಇಂತಹ ಸಮಸ್ಯೆಗೆ ಸರ್ಕಾರ ಪರಿಹಾರ ಕಂಡುಕೊಳ್ಳಬೇಕೆಂದರು.
ಈಗಾಗಲೇ ಗುಡ್ಡ ಕುಸಿತದಿಂದ ಬಂದ್ ಆಗಿರುವ ರಸ್ತೆಗಳ ತೆರವು ಕಾರ್ಯ ಭರದಿಂದ ನಡೆಯುತ್ತಿದೆ. ನಮ್ಮ ಒತ್ತಾಯಕ್ಕೆ ಹಲವು ಗುತ್ತಿಗೆದಾರರು ತಾತ್ಕಾಲಿಕ ರಸ್ತೆ ನಿರ್ಮಾಣ ಕಾಮಗಾರಿ ಮಾಡುತ್ತಿ ದ್ದಾರೆ. ಇಂತಹ ಗುತ್ತಿಗೆದಾರರಿಗೆ ತೊಂದರೆ ಆಗಬಾರದೆನ್ನುವ ನಿಟ್ಟಿನಲ್ಲಿ ತಕ್ಷಣವೇ ಅರ್ಧದಷ್ಟಾದರೂ ಬಿಲ್ ಪಾವತಿಗೆ ಕ್ರಮ ಕೈಗೊಳ್ಳಲಾಗುವದು. ನಂತರ ನಿಯಮ ಅನುಸರಿಸಿ ಹಣಪಾವತಿಸುವಂತೆ ಜಿಲ್ಲಾಧಿಕಾರಿ ಗಳಿಗೆ ಸೂಚಿಸಲಾಗುವದು ಎಂದು ರಂಜನ್ ತಿಳಿಸಿದರು.