ಮಡಿಕೇರಿ, ಸೆ.17: ಸೋಮವಾರಪೇಟೆ ಉಪ ನೋಂದಣಾಧಿಕಾರಿಗಳ ಕಚೇರಿಯ ವ್ಯಾಪ್ತಿಗೆ ಒಳಪಡುವ ಗ್ರಾಮಗಳು ಮತ್ತು ನಗರ ವ್ಯಾಪ್ತಿಯ ಮಾರುಕಟ್ಟೆ ದರವನ್ನು 2018-19ನೇ ಸಾಲಿಗೆ ಕಚೇರಿಯ ಸೂಚನೆ ಫಲಕದಲ್ಲಿ ಪ್ರಕಟಿಸಲಾಗಿದ್ದು, ಸಾರ್ವಜನಿಕರಿಂದ ಆಕ್ಷೇಪಣೆ ಇದ್ದಲ್ಲಿ 15 ದಿವಸದೊಳಗೆ ಸೋಮವಾರಪೇಟೆ ಉಪನೋಂದಣಾಧಿಕಾರಿಗಳ ಕಚೇರಿಗೆ ಸಲ್ಲಿಸಲು ಉಪ ನೋಂದಣಾಧಿಕಾರಿ ತಿಳಿಸಿದ್ದಾರೆ.