ಮಡಿಕೇರಿ, ಸೆ.17: ಕುಶಾಲನಗರ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತುರ್ತು ನಿರ್ವಹಣೆ ಮತ್ತು ದುರಸ್ತಿ ಕಾರ್ಯ ನಿರ್ವಹಿಸಬೇಕಿರುವದರಿಂದ ಕ.ವಿ.ಪ್ರ.ನಿ.ನಿ.ಅವರ ಕೋರಿಕೆಯಂತೆ ತಾ. 20 ರಂದು ಬೆಳಿಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯ ವರೆಗೆ ಕುಶಾಲನಗರ, ಸೋಮವಾರಪೇಟೆ, ಆಲೂರು ಸಿದ್ದಾಪುರ, ಸುಂಟಿಕೊಪ್ಪ ಹಾಗೂ ಮಡಿಕೇರಿ, ವಿದ್ಯುತ್ ಉಪಕೇಂದ್ರಗಳಲ್ಲಿ ವಿದ್ಯುತ್ ಸರಬರಾಜು ಸ್ಥಗಿತಗೊಳಿಸಲಾಗುವದು.

ಆದ್ದರಿಂದ ಕುಶಾಲನಗರ, ಕೂಡಿಗೆ, ನಂಜರಾಯಪಟ್ಟಣ, ಸುಂಟಿಕೊಪ್ಪ, ಚೆಟ್ಟಳ್ಳಿ, ಸೋಮವಾರಪೇಟೆ, ಶಾಂತಳ್ಳಿ, ಕುಮಾರಹಳ್ಳಿ, ಗೌಡಳ್ಳಿ, ಹೆಗ್ಗಡಮನೆ ಅಬ್ಬೂರುಕಟ್ಟೆ, ಐಗೂರು, ಆಲೂರು ಸಿದ್ದಾಪುರ, ಗೋಣಿಮರೂರು, ಮಾಲಂಬಿ, ಹೊಸಗುತ್ತಿ, ಗಣಗೂರು ಮಡಿಕೇರಿ, ಮೇಕೇರಿ, ಕಡಗದಾಳು, ಭಾಗಮಂಡಲ ಹಾಗೂ ಸುತ್ತಮುತ್ತಲವ್ಯಾಪ್ತಿಯ ಪ್ರದೇಶಗಳಲ್ಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಸೆಸ್ಕ್ ಪ್ರಕಟಣೆ ಕೋರಿದೆ.