*ಗೋಣಿಕೊಪ್ಪ, ಸೆ. 17: ಗೋಣಿಕೊಪ್ಪ ಸಮುದಾಯ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ರೋಗಿಗಳಿಗೆ ಚಿಕಿತ್ಸೆ ನೀಡದೆ ನಿರ್ಲಕ್ಷ್ಯ ತೋರುತ್ತಿದ್ದಾರೆ. ಆಸ್ಪತ್ರೆಗೆ ಬಂದ ರೋಗಿಗಳನ್ನು ತಮ್ಮ ಖಾಸಗಿ ಚಿಕಿತ್ಸಾ ಕೇಂದ್ರಕ್ಕೆ ಬರುವಂತೆ ಹೇಳಿ ರೋಗಿಗಳಿಂದ ಹಣ ಪಡೆದು ದಂಧೆ ನಡೆಸುತ್ತಿದ್ದಾರೆ. ಇವರ ಬಗ್ಗೆ ಕ್ರಮಕೈಗೊಳ್ಳುವಂತೆ ತಾ.ಪಂ. ತೈಮಾಸಿಕ ಸಭೆಯಲ್ಲಿ ತಾಲೂಕು ವೈದ್ಯಾಧಿಕಾರಿಗಳಿಗೆ ಸೂಚಿಸಲಾಯಿತು. ಪೊನ್ನಂಪೇಟೆ ತಾ.ಪಂ. ಸಾಮಥ್ರ್ಯ ಸೌಧ ಸಭಾಂಗಣದಲ್ಲಿ ತಾ.ಪಂ. ಅಧ್ಯಕ್ಷೆ ಬೊಳ್ಳಚಂಡ ಸ್ಮಿತಾ ಪ್ರಕಾಶ್ ಅಧ್ಯಕ್ಷತೆಯಲ್ಲಿ ನಡೆದ *ಗೋಣಿಕೊಪ್ಪ, ಸೆ. 17: ಗೋಣಿಕೊಪ್ಪ ಸಮುದಾಯ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ರೋಗಿಗಳಿಗೆ ಚಿಕಿತ್ಸೆ ನೀಡದೆ ನಿರ್ಲಕ್ಷ್ಯ ತೋರುತ್ತಿದ್ದಾರೆ. ಆಸ್ಪತ್ರೆಗೆ ಬಂದ ರೋಗಿಗಳನ್ನು ತಮ್ಮ ಖಾಸಗಿ ಚಿಕಿತ್ಸಾ ಕೇಂದ್ರಕ್ಕೆ ಬರುವಂತೆ ಹೇಳಿ ರೋಗಿಗಳಿಂದ ಹಣ ಪಡೆದು ದಂಧೆ ನಡೆಸುತ್ತಿದ್ದಾರೆ. ಇವರ ಬಗ್ಗೆ ಕ್ರಮಕೈಗೊಳ್ಳುವಂತೆ ತಾ.ಪಂ. ತೈಮಾಸಿಕ ಸಭೆಯಲ್ಲಿ ತಾಲೂಕು ವೈದ್ಯಾಧಿಕಾರಿಗಳಿಗೆ ಸೂಚಿಸಲಾಯಿತು.

ಪೊನ್ನಂಪೇಟೆ ತಾ.ಪಂ. ಸಾಮಥ್ರ್ಯ ಸೌಧ ಸಭಾಂಗಣದಲ್ಲಿ ತಾ.ಪಂ. ಅಧ್ಯಕ್ಷೆ ಬೊಳ್ಳಚಂಡ ಸ್ಮಿತಾ ಪ್ರಕಾಶ್ ಅಧ್ಯಕ್ಷತೆಯಲ್ಲಿ ನಡೆದ ರೋಗಿಗಳನ್ನು ಸಂಜೆಯ ನಂತರ ತಮ್ಮ ಖಾಸಗಿ ಕ್ಲಿನಿಕ್‍ಗೆ ಬರುವಂತೆ ಸೂಚಿಸುತ್ತಾರೆ. ನಂತರ ರೋಗಿಗಳಿಂದ ಹೆಚ್ಚು ಹಣ ಪಡೆದುಕೊಳ್ಳುತ್ತಿದ್ದಾರೆ, ಅಲ್ಲದೆ ಆರೋಗ್ಯ ಕೇಂದ್ರದ ಕಾವಲುಗಾರರು ಸಹ ರೋಗಿಗಳಿಗೆ ಗಣೇಶ್ ವೈದ್ಯರನ್ನು ಕಾಣಲು ಅವರ ಖಾಸಗಿ ಚಿಕಿತ್ಸಾ ಕೇಂದ್ರಕ್ಕೆ ಹೋಗಲು ತಿಳಿಸುತ್ತಾರೆ ಎಂಬ ಸಾರ್ವಜನಿಕರ ಗಂಭೀರ ಆರೋಪವನ್ನು ಸಭೆಯಲ್ಲಿ ಪ್ರಸ್ತಾಪಿಸಿದ ತಾ.ಪಂ. ಅಧ್ಯಕ್ಷೆ ಸ್ಮಿತಾ ಪ್ರಕಾಶ್ ವೈದ್ಯಾಧಿಕಾರಿಗಳ ವಿರುದ್ಧ ಶಿಸ್ತು ಕ್ರಮಕೈಗೊಳ್ಳುಬೇಕೆಂದು ತಾಲೂಕು ವೈದ್ಯಾಧಿಕಾರಿಗಳಿಗೆ ಸೂಚಿಸಿದರು.

(ಮೊದಲ ಪುಟದಿಂದ) ಅಬಕಾರಿ ಇಲಾಖೆಯಲ್ಲಿ ಉಪನಿರೀಕ್ಷಕರ ಚಾಲಕ ಅಕ್ರಮ ಮದ್ಯ ಮಾರಾಟಗಾರರಿಂದ ಹಣ ವಸೂಲಿ ಮಾಡುವ ಕಾಯಕದಲ್ಲಿ ತೊಡಗಿದ್ದಾರೆ. ಪ್ರತಿ ಗ್ರಾಮಗಳಲ್ಲಿಯೂ ಅಕ್ರಮ ಮದ್ಯ ಮಾರಾಟ ನಡೆಯುತ್ತಿದೆ. ಈ ಬಗ್ಗೆ ಮಾಹಿತಿ ಇದ್ದರೂ ಇಲಾಖೆ ಕಣ್ಣು ಮುಚ್ಚಿ ಕುಳಿತಿದೆ ಎಂದು ಅಧ್ಯಕ್ಷರು ಆರೋಪಿಸಿದರು.

ಕೃಷಿ ಇಲಾಖೆಯ ಮೂಲಕ ಹಿರಿಯ ಅಧಿಕಾರಿಗಳಿಂದ ತಾಲೂಕಿನಲ್ಲಿ ಉಂಟಾದ ಕೃಷಿ ನಷ್ಟದ ಬಗ್ಗೆ ಸರ್ವೆ ನಡೆಸಲಾಗಿದೆ, ಸುಮಾರು 5091 ನಷ್ಟವನ್ನು ಸರ್ವೆ ನಡೆಸಿ ದಾಖಲಿಸಲಾಗಿದೆ. ಆದರೆ ನಷ್ಟ ಪರಿಹಾರಕ್ಕೆ 1690 ಅರ್ಜಿಗಳಷ್ಟೆ ಬಂದಿವೆ ಎಂದು ತಾಲೂಕು ಕೃಷಿ ಇಲಾಖೆ ಸಹಾಯಕ ನಿರ್ದೇಶಕಿ ಸಭೆಗೆ ಮಾಹಿತಿ ನೀಡಿದರು. ಶಿಕ್ಷಣ ಇಲಾಖೆಗೆ ಒಳಪಡುವ ತಾಲೂಕಿನ 41 ಶಾಲೆಗಳ ಕೊಠಡಿ ದುರಸ್ತಿ ಕಾರ್ಯ ನಡೆಯಬೇಕೆಂದು ಕ್ಷೇತ್ರ ಶಿಕ್ಷಣಾಧಿಕಾರಿ ಲೋಕೇಶ್ ಮಾಹಿತಿ ನೀಡಿದರು. ಪಶು ಸಂಗೋಪನೆ ಇಲಾಖೆಯ ಮೂಲಕ ತಾಲೂಕಿನಲ್ಲಿ ಹಾಲು ಖರೀದಿ ಕೇಂದ್ರ ತೆರೆಯಲು ಕ್ರಮ ಕೈಗೊಳ್ಳಬೇಕೆಂದು ಉಪಾಧ್ಯಕ್ಷ ಚಲನ್ ಕುಮಾರ್ ಅಧಿಕಾರಿ ತಿಮ್ಮಯ್ಯ ಅವರಿಗೆ ಸೂಚಿಸಿದರು.

ತೋಟಗಾರಿಕಾ ಇಲಾಖೆಯಿಂದ ಬೆಳೆಗಾರರಿಗೆ ಯಾವದೇ ಪ್ರಯೋಜನ ಕಾರ್ಯಗಳು ನಡೆಯುತ್ತಿಲ್ಲ. ಮಾರ್ಚ್ ತಿಂಗಳ ಒಳಗೆ ನೀಡಬೇಕಾದ ಕಾಳು ಮೆಣಸಿನ ಸಸಿಗಳನ್ನು ಅವಧಿಯ ನಂತರ ವಿತರಿಸುತ್ತಿದ್ದಾರೆ. ತೋಟಗಾರಿಕೆ ಇಲಾಖೆ ವತಿಯಿಂದ ಬೆಳೆಗಾರರಿಗೆ ಅನಾನುಕೂಲವಾಗುತ್ತಿದೆ ಎಂದು ಉಪಾಧ್ಯಕ್ಷ ಚಲನ್ ಕುಮಾರ್ ಆರೋಪಿಸಿದರು. ಪರಿಶಿಷ್ಟ ವರ್ಗ ಕಲ್ಯಾಣ ಇಲಾಖೆ ಅಧಿಕಾರಿ ಚಂದ್ರಶೇಖರ್, ಮೀನುಗಾರಿಕೆ ಇಲಾಖೆ ಅಧಿಕಾರಿ ಪ್ರಿಯ, ಹಿಂದುಳಿದ ವರ್ಗ ಕಲ್ಯಾಣ ಇಲಾಖೆ ಅಧಿಕಾರಿ ಕವಿತ, ಸಮಾಜ ಕಲ್ಯಾಣ ಇಲಾಖೆ, ಲೋಕೋಪಯೋಗಿ, ಅರಣ್ಯ ಇಲಾಖೆ, ಚೆಸ್ಕಾಂ, ಅಕ್ಷರ ದಾಸೋಹ ಇಲಾಖೆಯ ಅಧಿಕಾರಿಗಳು ಇಲಾಖೆಯ ಪ್ರಗತಿ ಬಗ್ಗೆ ಮಾಹಿತಿ ನೀಡಿದರು. ಸಭೆಗೆ ಗೈರು ಹಾಜರಾದ ಇಲಾಖೆಯ ಅಧಿಕಾರಿಗಳಿಗೆ ನೋಟೀಸ್ ನೀಡುವಂತೆ ಸಭೆಯಲ್ಲಿ ತೀರ್ಮಾನಿಸಲಾಯಿತು. ಇದಕ್ಕೂ ಮೊದಲು ಸ್ಥಾಯಿ ಸಮಿತಿ ಸಭೆ ಅಧ್ಯಕ್ಷೆ ಸ್ಮಿತಾ ಪ್ರಕಾಶ್ ಅಧ್ಯಕ್ಷತೆಯಲ್ಲಿ ನಡೆಯಿತು. ಸಭೆಗೂ ಮೊದಲು ಪ್ರಕೃತಿ ವಿಕೋಪ ದಿಂದ ಮಡಿದವರಿಗೆ ಸಂತಾಪ ಸೂಚಿಸಲಾಯಿತು. ಸಭೆಯಲ್ಲಿ ತಾ.ಪಂ. ಕಾರ್ಯ ನಿರ್ವಹಣಾಧಿಕಾರಿ ಜಯಣ್ಣ, ಸ್ಥಾಯಿ ಸಮಿತಿ ಅಧ್ಯಕ್ಷ ಜನಿತ್ ಉಪಸ್ಥಿತರಿದ್ದರು.