ಗೋಣಿಕೊಪ್ಪಲು, ಸೆ. 17: ಕಾವೇರಿ ಪ.ಪೂ.ಕಾ.ನಲ್ಲಿ ಶಿಕ್ಷಕರ ದಿನಾಚರಣೆಯನ್ನು ಹಮ್ಮಿಕೊಳ್ಳಲಾಗಿತ್ತು. ಕೊಡಗಿನ ಪ್ರಾಕೃತಿಕ ವಿಕೋಪಕ್ಕೆ ಸಿಲುಕಿ ಸಾವನ್ನಪ್ಪಿದವರಿಗೆ ಶ್ರದ್ಧಾಂಜಲಿ ಸಲ್ಲಿಸಿ ಯಾವದೇ ಸಭಾ ಕಾರ್ಯಕ್ರಮ ನಡೆಸದೆ ವಿದ್ಯಾರ್ಥಿಗಳು ಮತ್ತು ಉಪನ್ಯಾಸಕರು ವಿವಿಧ ಕ್ರೀಡೆಗಳಲ್ಲಿ ಪಾಲ್ಗೊಂಡು ಸಾಂಕೇತಿಕವಾಗಿ ಶಿಕ್ಷಕರ ದಿನಾಚರಣೆಯನ್ನು ಆಚರಿಸಿದರು. ವಿದ್ಯಾರ್ಥಿ ಕ್ಷೇಮಾಭಿವೃದ್ಧಿ ಸಂಘದ ಪದಾಧಿಕಾರಿಗಳಾದ ಬೋಪಣ್ಣ ಪಿ.ಟಿ. ಮತ್ತು ಪಲ್ಲವಿ ಹಾಗೂ ಆರ್ಯ ಅವರುಗಳು ಆಯೋಜಿಸಿದ್ದ ಈ ಕಾರ್ಯಕ್ರಮದಲ್ಲಿ ಪ್ರಾಂಶುಪಾಲ ಎಸ್. ಎಸ್. ಮಾದಯ್ಯ, ಉಪನ್ಯಾಸಕರು ಭಾಗವಹಿಸಿದ್ದರು.