ಮಡಿಕೆರಿ, ಸೆ. 18: ಕೊಡವ ವiಕ್ಕಡ ಕೂಟ ಹಾಗೂ ಕೊಡವ ಸಮಾಜ ಪೊಮ್ಮಕ್ಕಡ ಕೂಟ ಮಡಿಕೇರಿ ಇವರ ಸಂಯುಕ್ತ ಆಶ್ರಯದಲ್ಲಿ ಹಿರಿಯ ಸಾಹಿತಿ ಮೊಣ್ಣಂಡ ಶೋಭಾ ಸುಬ್ಬಯ್ಯನವರು ಕೊಡವ ಭಾಷೆಯಲ್ಲಿ ಬರೆದಿರುವ ‘ಕೊಡವ ಭಾಗವತ’ ಪುಸ್ತಕ ಬಿಡುಗಡೆ ಕಾರ್ಯಕ್ರಮ ತಾ. 22 ರಂದು ಕೊಡವ ವiಕ್ಕಡ ಕೂಟದ ಅಧ್ಯಕ್ಷ ಬೊಳ್ಳಜಿರ ಬಿ. ಅಯ್ಯಪ್ಪ ಅವರ ಅಧ್ಯಕ್ಷತೆಯಲ್ಲಿ ಮಡಿಕೇರಿಯ ಜನರಲ್ ತಿಮ್ಮಯ್ಯ ಸ್ಕೂಲ್‍ನಲ್ಲಿ ನಡೆಯಲಿದೆ ಎಂದು ಕೊಡವ ಮಕ್ಕಡ ಕೂಟದ ಕಾರ್ಯದರ್ಶಿ ಪುತ್ತರಿರ ಕರುಣ್ ಕಾಳಯ್ಯ ತಿಳಿಸಿದ್ದಾರೆ.

ಇದು ಕೊಡವ ಮಕ್ಕಡ ಕೂಟದ ಕೊಡವ ಸಾಹಿತ್ಯ ಮಾಲೆಯ 15ನೇ ಪುಸ್ತಕವಾಗಿದ್ದು, ಆಗಸ್ಟ್ 17 ರಂದು ಬಿಡುಗಡೆಯಾಗಯಾಗಬೇಕಿತ್ತು. ಕೊಡಗಿನಲ್ಲಿ ಪ್ರಕೃತಿ ವಿಕೋಪದ ಘಟನೆಯಿಂದ ಈ ಕಾರ್ಯಕ್ರಮವನ್ನು ತಾ. 22 ರಂದು ನಡೆಸಲಾಗುವದು. ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಕರ್ನಾಟಕ ಜನಪದ ಸಾಹಿತ್ಯ ಪರಿಷತ್ತಿನ ಕೊಡಗು ಜಿಲ್ಲಾ ಅಧ್ಯಕ್ಷರು ಹಾಗೂ ಶಕ್ತಿ ದಿನಪತ್ರಿಕೆಯ ಸಲಹಾ ಸಂಪಾದಕ ಬಿ.ಜಿ. ಅನಂತಶಯನ ಪುಸ್ತಕ ಬಿಡುಗಡೆಗೊಳಿಸಲಿರುವರು. ಅತಿಥಿಗಳಾಗಿ ಹಿರಿಯ ಸಾಹಿತಿ ಮೊಣ್ಣಂಡ ಶೋಭಾ ಸುಬ್ಬಯ್ಯ, ಮಡಿಕೇರಿ ಕೊಡವ ಸಮಾಜ ಪೊಮ್ಮಕ್ಕಡ ಕೂಟದ ಅಧ್ಯಕ್ಷೆ ಕನ್ನಂಡ ಕವಿತ ಬೊಳ್ಳಪ್ಪ, ಜನರಲ್ ತಿಮ್ಮಯ್ಯ ಸ್ಕೂಲ್‍ನ ಪ್ರಾಂಶುಪಾಲೆ ಕಲ್‍ಮಾಡಂಡ ಸರಸ್ವತಿ ಸುಬ್ಬಯ್ಯ ಹಾಗೂ ಕೊಡವ ಮಕ್ಕಡ ಕೂಟದ ಸದಸ್ಯರು ಹಾಗೂ ಪೊಮ್ಮಕ್ಕಡ ಕೂಟದ ಸದಸ್ಯರು ಭಾಗಹಿಸಲಿರುವರು.