ಕೂಡಿಗೆ, ಸೆ. 19: ಹೆಬ್ಬಾಲೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಣಿವೆಯ ಶ್ರೀ ರಾಮಲಿಂಗೇಶ್ವರ ದೇವಾಲಯದ ಬಳಿಯ ಉದ್ಯಾನವನ ಕಾಮಗಾರಿಗೆ ಈಗಾಗಲೇ ಚಾಲನೆ ನೀಡಲಾಗಿದ್ದು, ಉದ್ಯಾನವನ ಸ್ಥಳಕ್ಕೆ ಗಿಡಗಳನ್ನು ನೆಡಲಾಗಿದೆ.
ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆಯಡಿಯಲ್ಲಿ ಈ ಕಾಮಗಾರಿಗೆ ರೂ. 1.5 ಲಕ್ಷ ಹಣವನ್ನು ಕಾದಿರಿಸಿ ಪವಿತ್ರ ಕಾವೇರಿ ನದಿ ದಡದಲ್ಲಿರುವ ಶ್ರೀ ರಾಮಲಿಂಗೇಶ್ವರ ದೇವಾಲಯದ ಮೇಲ್ಭಾಗದಲ್ಲಿ ಕಾಡುಮಯವಾಗಿದ್ದ ಗುಡ್ಡವನ್ನು ಸ್ವಚ್ಛಗೊಳಿಸಿ, ಈ ಗುಡ್ಡವನ್ನು ಉದ್ಯಾನವನವನ್ನಾಗಿ ಪರಿವರ್ತಿಸಿ ಪ್ರವಾಸಿಗರಿಗೆ ಅನುಕೂಲವಾಗುವಂತೆ ಕಾಮಗಾರಿಯನ್ನು ಕೈಗೊಳ್ಳಲಾಗಿದೆ.
ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ರಾಕೇಶ್, ಗ್ರಾಮ ಪಂಚಾಯಿತಿ ಸದಸ್ಯರಾದ ವೆಂಕಟೇಶ್, ಶಿವನಂಜಪ್ಪ, ಮಂಜುಳಾ ಹಾಗೂ ಗ್ರಾಮಸ್ಥರು ಇದ್ದರು.