ಮಡಿಕೇರಿ, ಸೆ. 19: ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕೆ.ಪಿ. ಬಾಣೆ ಶಾಲೆಯಲ್ಲಿ 2018-19ನೇ ಸಾಲಿನಲ್ಲಿ ಶಾಲಾ ಮಕ್ಕಳಿಗೆ ಸರಕಾರದಿಂದ ಉಚಿತವಾಗಿ ದೊರೆತ ಶೂ ಮತ್ತು ಸಾಕ್ಸ್‍ನ್ನು ಇತ್ತೀಚೆಗೆ ವಿತರಿಸಲಾಯಿತು. ಈ ಸಮಾರಂಭದಲ್ಲಿ ಶಾಲೆಯ ಎಸ್‍ಡಿಎಂಸಿ ಅಧ್ಯಕ್ಷರು ಸದಸ್ಯರು, ಗ್ರಾ.ಪಂ. ಸದಸ್ಯರು, ಶಾಲೆಯ ಮುಖ್ಯೋಪಾಧ್ಯಾಯರು, ಶಿಕ್ಷಕರು ಹಾಜರಿದ್ದರು.