ನಾಪೆÇೀಕ್ಲು, ಸೆ. 19: ವಿದ್ಯಾರ್ಥಿಗಳು ಪಠ್ಯದೊಂದಿಗೆ, ಪಠ್ಯೇತರ ಚಟುವಟಿಕೆಗಳಲ್ಲಿಯೂ ಭಾಗವಹಿಸುವದರಿಂದ ತಮ್ಮಲ್ಲಿ ಅಡಗಿರುವ ಸುಪ್ತ ಪ್ರತಿಭೆಗಳ ಅನಾವರಣದೊಂದಿಗೆ ಶಾರೀರಿಕ ಮತ್ತು ದೈಹಿಕ ಬೆಳವಣಿಗೆಯೂ ಸಾಧ್ಯ ಎಂದು ಜಿಲ್ಲಾ ಪಂಚಾಯಿತಿ ಸದಸ್ಯ ಪಾಡಿಯಮ್ಮಂಡ ಮುರಳಿ ಕರುಂಬಮ್ಮಯ್ಯ ಅಭಿಪ್ರಾಯಪಟ್ಟರು.

ನಾಪೆÇೀಕ್ಲು ಸರಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ಆಯೋಜಿಸಲಾಗಿದ್ದ ನಾಪೆÇೀಕ್ಲು ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಪ್ರತಿಭಾ ಕಾರಂಜಿಯಲ್ಲಿ ಕನ್ನಡ- ಇಂಗ್ಲಿಷ್ ಎಂಬ ಬೇಧವಿಲ್ಲದೆ ವಿದ್ಯಾರ್ಥಿಗಳು ಮುಕ್ತವಾಗಿ ಪಾಲ್ಗೊಳ್ಳಲು ಅವಕಾಶವಿದೆ. ಅದರೊಂದಿಗೆ ವಿದ್ಯಾರ್ಥಿಗಳ ನಡುವೆ ಪರಸ್ಪರ ಸ್ನೇಹ ಸೌಹಾರ್ದವು ವೃದ್ಧಿಯಾಗಲಿದೆ ಎಂದರು.

ವಿದ್ಯಾರ್ಥಿಗಳು ಪ್ರತಿಭಾ ಕಾರಂಜಿಯಲ್ಲಿ ಭಾಗವಹಿಸುವ ಮೂಲಕ ರಾಜ್ಯ ಮಟ್ಟದವರೆಗೂ ತಮ್ಮ ಪ್ರತಿಭೆಗಳನ್ನು ತೋರ್ಪಡಿಸಲು ಅವಕಾಶವಿದೆ ಎಂದ ಅವರು ಸೋಲು, ಗೆಲುವು ಮುಖ್ಯವಲ್ಲ. ಎಲ್ಲಾ ವಿದ್ಯಾರ್ಥಿಗಳು ಇದರಲ್ಲಿ ಪಾಲ್ಗೊಳ್ಳುವ ಮೂಲಕ ಸ್ಪರ್ಧೆ ಏರ್ಪಡಿಸಬೇಕು. ಇದು ವಿದ್ಯಾರ್ಥಿಗಳ ಮುಂದಿನ ಬದುಕಿಗೆ ದಾರಿ ದೀಪವಾಗಲಿದೆ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಚಂದ್ರ ವಹಿಸಿದ್ದರು.

ವೇದಿಕೆಯಲ್ಲಿ ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಅಧ್ಯಕ್ಷ ಎಂ.ಕೆ. ಮೆಹಬೂಬ್ ಸಾಬ್, ಬಲ್ಲಮಾವಟಿ ನೇತಾಜಿ ವಿದ್ಯಾಸಂಸ್ಥೆಯ ಗಣಿತ ಶಿಕ್ಷಕ ಸಿ.ಎಸ್. ಸುರೇಶ್, ತಾಲೂಕು ಪ್ರಾಥಮಿಕ ಶಾಲಾ ಸಹ ಶಿಕ್ಷಕರ ಸಂಘದ ಅಧ್ಯಕ್ಷ ಟಿ.ಆರ್. ಸುಬ್ರಮಣಿ, ನಾಪೆÇೀಕ್ಲು ಸರಕಾರಿ ಮಾದರಿ ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕ ಸುರೇಶ್ ಇದ್ದರು.

ಕಾರ್ಯಕ್ರಮದಲ್ಲಿ ವಿದ್ಯಾರ್ಥಿನಿ ಯರಿಂದ ಪ್ರಾರ್ಥನೆ, ಕ್ಲಸ್ಟರ್ ಸಂಪನ್ಮೂಲ ವ್ಯಕ್ತಿ ಮಾದೇಶ್ ಸ್ವಾಗತಿಸಿ, ವಂದಿಸಿದರು. ಸ್ಪರ್ಧೆಯಲ್ಲಿ ನಾಪೆÇೀಕ್ಲು ಕ್ಲಸ್ಟರ್‍ಗೆ ಒಳಪಟ್ಟ 21 ಶಾಲೆಗಳ ವಿದ್ಯಾರ್ಥಿಗಳು, ಸಂಬಂಧಿಸಿದ ಶಿಕ್ಷಕರು ಪಾಲ್ಗೊಂಡಿದ್ದರು.