ಮಡಿಕೇರಿ, ಸೆ. 20: ಜಿಲ್ಲಾ ಪಂಚಾಯಿತಿ, ಸಾರ್ವಜನಿಕ ಶಿಕ್ಷಣ ಇಲಾಖೆ ಮತ್ತು ಮರಗೋಡು ಭಾರತಿ ಸಂಯುಕ್ತ ಪದವಿಪೂರ್ವ ಕಾಲೇಜು ಇವರ ಸಂಯುಕ್ತ ಆಶ್ರಯದಲ್ಲಿ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿಭಾಗದ 2018-19ನೇ ಕೊಡಗು ಜಿಲ್ಲಾ ಮಟ್ಟದ ಕ್ರೀಡಾಕೂಟದ ಉದ್ಘಾಟನಾ ಸಮಾರಂಭ ತಾ. 22 ರಂದು ಬೆಳಿಗ್ಗೆ 10 ಗಂಟೆಗೆ ಮರಗೋಡು ಭಾರತಿ ಸಂಯುಕ್ತ ಪದವಿಪೂರ್ವ ಕಾಲೇಜಿನಲ್ಲಿ ನಡೆಯಲಿದೆ.