ಸೋಮವಾರಪೇಟೆ,ಸೆ.20: ಸಮೀಪದ ತೋಳೂರುಶೆಟ್ಟಳ್ಳಿ ಹಾಗೂ ಕೂತಿ ಗ್ರಾಮದಲ್ಲಿ ಪ್ರತಿಷ್ಠಾಪಿಸಲಾಗಿದ್ದ ಗೌರಿ ಗಣೇಶ ಉತ್ಸವ ಮೂರ್ತಿ ಗಳನ್ನು ಗ್ರಾಮದ ಪ್ರಮುಖ ರಸ್ತೆಗಳಲ್ಲಿ ಮೆರವಣಿಗೆ ನಡೆಸಿ ನಂತರ ಕೆರೆಯಲ್ಲಿ ವಿಸರ್ಜಿಸಲಾಯಿತು. ಅಲಂಕೃತ ವಾಹನದಲ್ಲಿ ಉತ್ಸವ ಮೂರ್ತಿಗಳಿಗೆ ವಿಶೇಷ ಪೂಜೆ ಸಲ್ಲಿಸಿ, ರಸ್ತೆಯುದ್ದಕ್ಕೂ ಈಡುಗಾಯಿ ಒಡೆದು, ಸಾರ್ವಜನಿಕ ಭಕ್ತಾದಿಗಳಿಗೆ ಪ್ರಸಾದ ವಿತರಿಸಲಾಯಿತು.