ಮಡಿಕೇರಿ, ಸೆ. 20: ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ತಾ. 22 ರಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 2 ಗಂಟೆಯವರೆಗೆ ನಗರದ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಉದ್ಯೋಗ ಮೇಳ ನಡೆಯಲಿದೆ.
ಎಸ್.ಎಸ್.ಎಲ್.ಸಿ, ಪಿ.ಯು.ಸಿ., ಐ.ಟಿ.ಐ, ಡಿಪ್ಲೋಮ ಹಾಗೂ ಯಾವದೇ ಪದವಿ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಈ ಉದ್ಯೋಗ ಮೇಳದಲ್ಲಿ ಭಾಗವಹಿಸ ಬಹುದಾಗಿದೆ. ಅಭ್ಯರ್ಥಿಗಳು ವಿದ್ಯಾರ್ಹತೆಯ ಮೂಲ ದಾಖಲಾತಿ ಗಳು, ಅನುಭವ ಪ್ರಮಾಣಪತ್ರ ಹಾಗೂ ಸ್ವ-ವಿವರಗಳ ಪ್ರತಿಗ ಳೊಂದಿಗೆ ಉದ್ಯೋಗ ಮೇಳದಲ್ಲಿ ಹಾಜರಾಗುವಂತೆ ತಿಳಿಸಲಾಗಿದೆ.