ಸೋಮವಾರಪೇಟೆ, ಸೆ. 20: ತಾಲೂಕಿನ ಮಾದಾಪುರ ಗ್ರಾಮ ಪಂಚಾಯಿತಿಯ ಗ್ರಾಮ ಸಭೆ ತಾ. 22 ರಂದು ಪೂರ್ವಾಹ್ನ 10.30ಕ್ಕೆ ಅಲ್ಲಿನ ಕೃಷಿ ಪತ್ತಿನ ಸಹಕಾರ ಭವನದ ಸಭಾಂಗಣದಲ್ಲಿ ಅಧ್ಯಕ್ಷೆ ಎನ್. ಲತಾ ಅಧ್ಯಕ್ಷತೆಯಲ್ಲಿ ನಡೆಯಲಿದೆ ಎಂದು ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಪರಮೇಶ್ ತಿಳಿಸಿದ್ದಾರೆ.

ಸಭೆಯಲ್ಲಿ ಜಿ.ಪಂ. ಸದಸ್ಯೆ ಕುಮುದ ಧರ್ಮಪ್ಪ, ತಾ.ಪಂ. ಉಪಾಧ್ಯಕ್ಷ ಎಂ.ಬಿ. ಅಭಿಮನ್ಯು ಕುಮಾರ್, ಸಂಪನ್ಮೂಲ ವ್ಯಕ್ತಿಯಾಗಿ ಮಾದಾಪುರ ಪಶು ವೈದ್ಯ ಇಲಾಖೆಯ ಡಾ. ಸಂಜೀವ್‍ಕುಮಾರ್ ಶಿಂಧೆ ಸೇರಿದಂತೆ ವಿವಿಧ ಇಲಾಖಾಧಿಕಾರಿ ಗಳು ಭಾಗವಹಿಸಲಿದ್ದಾರೆ ಎಂದು ಪಿಡಿಓ ತಿಳಿಸಿದ್ದಾರೆ.