ಮಡಿಕೇರಿ, ಸೆ. 20: ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಮತ್ತು ನಾಪೋಕ್ಲು ಹೋಬಳಿ ಘಟಕದ ವತಿಯಿಂದ ತಾ. 22 ರಂದು ಬೆಳಗ್ಗೆ 10.30 ಕ್ಕೆ ನಾಪೋಕ್ಲು ಸರ್ಕಾರಿ ಪದವಿ ಪೂರ್ವ ಕಾಲೇಜು ಪ್ರೌಢಶಾಲಾ ವಿಭಾಗದ ಸಭಾಂಗಣದಲ್ಲಿ ಸಂಪಾಜೆ ಸಣ್ಣಯ್ಯ ಪಟೇಲ್ ದತ್ತಿ ಹಾಗೂ ವಿಶ್ವಮುಖಿ ಭಾರತ ಕಾರ್ಯಕ್ರಮ ನಡೆಯಲಿದೆ.

ಕಾರ್ಯಕ್ರಮವನ್ನು ಸ.ಪ.ಪೂ ಕಾಲೇಜಿನ ಪ್ರೌಢಶಾಲಾ ವಿಭಾಗದ ಪ್ರಾಂಶುಪಾಲರಾದ ಪಿ.ಕೆ.ನಳಿನಿ ಅವರು ಉದ್ಘಾಟಿಸಲಿದ್ದಾರೆ. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿರುವ ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಬಿ.ಎಸ್.ಲೋಕೇಶ್‍ಸಾಗರ್ ಅವರು ವಿಶ್ವಮುಖಿ ಭಾರತ ತಾ. 11 ರ ಬಗ್ಗೆ ಉಪನ್ಯಾಸ ಹಾಗೂ ರಮೇಶ್ ಅಳವಾರ ಅವರು ಗ್ರಾಮೀಣ ಜಾನಪದ ಸೊಗಡು ಎಂಬ ವಿಷಯದ ಬಗ್ಗೆ ದತ್ತಿ ಉಪನ್ಯಾಸ ನೀಡಲಿದ್ದಾರೆ.

ಮುಖ್ಯ ಅತಿಥಿಗಳಾಗಿ ಕೊಳಕೇರಿ ವಿವಿದೋದ್ದೇಶ ಸಹಕಾರ ಸಂಘದ ಅಧ್ಯಕ್ಷ ಕುಂಡೋಳಂಡ ರಮೇಶ್ ಮುದ್ದಯ್ಯ, ಮಡಿಕೇರಿ ತಾಲೂಕು ಕಸಾಪ ಅಧ್ಯಕ್ಷ ಕುಡೆಕಲ್ ಸಂತೋಷ್, ನಾಪೋಕ್ಲು ಹೋಬಳಿ ಘಟಕದ ಅಧ್ಯಕ್ಷ ಸುರೇಶ್ ಆಗಮಿಸಲಿದ್ದಾರೆ ಎಂದು ಕನ್ನಡ ಸಾಹಿತ್ಯ ಪರಿಷತ್ತು ಗೌರವ ಕಾರ್ಯದರ್ಶಿ ಕೆ.ಎಸ್.ರಮೇಶ್ ತಿಳಿಸಿದ್ದಾರೆ.