ಸೋಮವಾರಪೇಟೆ, ಸೆ. 22: ದೊಡ್ಡಮಳ್ತೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಆಗಿರುವ ಕೆರೆಗಳ ಒತ್ತುವರಿಯನ್ನು ತೆರವುಗೊಳಿಸಲು ಕ್ರಮ ಕೈಗೊಳ್ಳಬೇಕೆಂದು ಗ್ರಾಮ ಸಭೆಯಲ್ಲಿ ಸಾರ್ವಜನಿಕರು ಆಗ್ರಹಿಸಿದರು.
ಪಂಚಾಯಿತಿ ಸಭಾಂಗಣದಲ್ಲಿ ಅಧ್ಯಕ್ಷ ಎಸ್.ಡಿ. ದಿವಾಕರ್ ಅಧ್ಯಕ್ಷತೆಯಲ್ಲಿ ನಡೆದ ಗ್ರಾಮ ಸಭೆಯಲ್ಲಿ ಈ ಬಗ್ಗೆ ವಿಷಯ ಪ್ರಸ್ತಾಪಗೊಂಡು ಕೃಷಿಗೆ ನೀರುಣಿಸಬೇಕಾದ ಗ್ರಾಮೀಣ ಕೆರೆಗಳು ಒತ್ತುವರಿಯಾಗಿದ್ದು, ಒತ್ತುವರಿ ತೆರವಿಗೆ ಪಂಚಾಯಿತಿ ಕ್ರಮ ಕೈಗೊಳ್ಳಬೇಕೆಂಬ ಆಗ್ರಹ ಕೇಳಿಬಂದಿತು.
ಗ್ರಾ.ಪಂ. ವ್ಯಾಪ್ತಿಯ ಪ್ರತಿ ಗ್ರಾಮಗಳಲ್ಲೂ ಕೆರೆಗಳಿದ್ದು, ನೀರು ಸಂಗ್ರಹವಾಗಿದೆ. ಆದರೆ ಬಹುತೇಕ ಕೆರೆಗಳನ್ನು ಊರಿನ ಕೆಲ ಮುಖಂಡರೆ ಒತ್ತುವರಿ ಮಾಡಿಕೊಂಡಿದ್ದಾರೆ. ಕಾನೂನು ಪ್ರಕಾರವಾಗಿ ಒತ್ತುವರಿ ತೆರವಿಗೆ ಪಂಚಾಯಿತಿ ಆಡಳಿತ ಕ್ರಮ ಕೈಗೊಳ್ಳಬೇಕೆಂದು ಗೆಜ್ಜೆಹಣಕೋಡು ಮಹೇಶ್ ಒತ್ತಾಯಿಸಿದರು. ಕೆರೆ ಜಾಗ ಒತ್ತುವರಿ ತೆರವಿಗೆ ಪಂಚಾಯಿತಿ
ಸೋಮವಾರಪೇಟೆ, ಸೆ. 22: ದೊಡ್ಡಮಳ್ತೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಆಗಿರುವ ಕೆರೆಗಳ ಒತ್ತುವರಿಯನ್ನು ತೆರವುಗೊಳಿಸಲು ಕ್ರಮ ಕೈಗೊಳ್ಳಬೇಕೆಂದು ಗ್ರಾಮ ಸಭೆಯಲ್ಲಿ ಸಾರ್ವಜನಿಕರು ಆಗ್ರಹಿಸಿದರು.
ಪಂಚಾಯಿತಿ ಸಭಾಂಗಣದಲ್ಲಿ ಅಧ್ಯಕ್ಷ ಎಸ್.ಡಿ. ದಿವಾಕರ್ ಅಧ್ಯಕ್ಷತೆಯಲ್ಲಿ ನಡೆದ ಗ್ರಾಮ ಸಭೆಯಲ್ಲಿ ಈ ಬಗ್ಗೆ ವಿಷಯ ಪ್ರಸ್ತಾಪಗೊಂಡು ಕೃಷಿಗೆ ನೀರುಣಿಸಬೇಕಾದ ಗ್ರಾಮೀಣ ಕೆರೆಗಳು ಒತ್ತುವರಿಯಾಗಿದ್ದು, ಒತ್ತುವರಿ ತೆರವಿಗೆ ಪಂಚಾಯಿತಿ ಕ್ರಮ ಕೈಗೊಳ್ಳಬೇಕೆಂಬ ಆಗ್ರಹ ಕೇಳಿಬಂದಿತು.
ಗ್ರಾ.ಪಂ. ವ್ಯಾಪ್ತಿಯ ಪ್ರತಿ ಗ್ರಾಮಗಳಲ್ಲೂ ಕೆರೆಗಳಿದ್ದು, ನೀರು ಸಂಗ್ರಹವಾಗಿದೆ. ಆದರೆ ಬಹುತೇಕ ಕೆರೆಗಳನ್ನು ಊರಿನ ಕೆಲ ಮುಖಂಡರೆ ಒತ್ತುವರಿ ಮಾಡಿಕೊಂಡಿದ್ದಾರೆ. ಕಾನೂನು ಪ್ರಕಾರವಾಗಿ ಒತ್ತುವರಿ ತೆರವಿಗೆ ಪಂಚಾಯಿತಿ ಆಡಳಿತ ಕ್ರಮ ಕೈಗೊಳ್ಳಬೇಕೆಂದು ಗೆಜ್ಜೆಹಣಕೋಡು ಮಹೇಶ್ ಒತ್ತಾಯಿಸಿದರು. ಕೆರೆ ಜಾಗ ಒತ್ತುವರಿ ತೆರವಿಗೆ ಪಂಚಾಯಿತಿ ಬೇರ್ಪಡಿಸಿ ಸಂಗ್ರಹಿಸಲಾಗುತ್ತದೆ. ಅತ್ಯಂತ ವ್ಯವಸ್ಥಿತವಾಗಿ ಘಟಕ ಸ್ಥಾಪಿಸಲಾಗುತ್ತದೆ. ಇದರಿಂದ ಯಾವದೇ ಸಮಸ್ಯೆ ಇಲ್ಲ ಎಂದು ಅವರು ಹೇಳಿದರು. ದೊಡ್ಡಮಳ್ತೆ ವ್ಯಾಪ್ತಿಯಲ್ಲಿ ಕಾಡಾನೆಗಳ ಹಾವಳಿ ಯಿಂದ ಫಸಲು ನಷ್ಟವಾಗುತ್ತಿದೆ. ಹಾವಳಿ ತಡೆಗಟ್ಟಲು ಶಾಶ್ವತ ಪರಿಹಾರ ಕಂಡುಹಿಡಿಯಬೇಕು ಎಂದು ಕೊಮಾರಪ್ಪ ಅವರು ಅರಣ್ಯಾಧಿಕಾ ರಿಯನ್ನು ಒತ್ತಾಯಿಸಿದರು. ಆನೆ ಕಂದಕ ನಿರ್ಮಾಣವಾಗಿದ್ದು, ಮಧ್ಯೆ ಕಲ್ಲುಬಂಡೆಗಳು ಸಿಕ್ಕಿವೆ. ಈಗಾಗಲೆ ಬಂಡೆ ಒಡೆಸಲು ಪ್ರಸ್ತಾವನೆ ಸಲ್ಲಿಸಲಾಗಿದೆ. ಅನುದಾನ ಸಿಕ್ಕಿದ ತಕ್ಷಣ ಕೆಲಸ ಪ್ರಾರಂಭಿಸಲಾಗುವದು ಎಂದು ಅರಣ್ಯಾಧಿಕಾರಿ ಮಾಹಿತಿ ನೀಡಿದರು.
ದೊಡ್ಡಮಳ್ತೆ ಗ್ರಾಪಂ ವ್ಯಾಪ್ತಿಯ ಕೆಲ ಅಂಗಡಿಗಳಲ್ಲಿ ಅಕ್ರಮವಾಗಿ ಮದ್ಯ ಮಾರಾಟ ನಡೆಯುತ್ತಿದ್ದು, ಮದ್ಯವನ್ನು ದುಪ್ಪಟ್ಟು ಬೆಲೆಗೆ ಮಾರಾಟ ಮಾಡಲಾಗುತ್ತಿದೆ. ಅಬಕಾರಿ ಇಲಾಖೆ ಕ್ರಮಕೈಗೊಳ್ಳಬೇಕು. ಅಲ್ಲದೆ ದೊಡ್ಡಮಳ್ತೆಯಲ್ಲಿ ಸಗಟು ಮದ್ಯ ಮಾರಾಟಕ್ಕೆ ಪಂಚಾಯಿತಿ ಅವಕಾಶ ಮಾಡಿಕೊಡಬೇಕು ಎಂದು ಮಹೇಶ್ ಒತ್ತಾಯಿಸಿದರು.
ಪಂಚಾಯಿತಿ ವ್ಯಾಪ್ತಿಯಲ್ಲಿ ನರೇಗಾ ಯೋಜನೆಯಲ್ಲಿ 95ಲಕ್ಷ ರೂ.ಗಳ ವಿವಿಧ ಕಾಮಗಾರಿಗಳಿಗೆ ಕ್ರಿಯಾಯೋಜನೆ ತಯಾರಿಸಲಾಗಿದ್ದು, ಅನುಮೋದನೆ ಸಿಕ್ಕಿದೆ. ಕಾಮಗಾರಿ ನಿರ್ವಹಿಸಲು ಗ್ರಾಮಸ್ಥರು ಹೆಚ್ಚಿನ ಮುತುವರ್ಜಿ ವಹಿಸಬೇಕು ಎಂದು ಪಿಡಿಒ ಮನವಿ ಮಾಡಿದರು.
ಸಭೆಯಲ್ಲಿ ಪಂಚಾಯಿತಿ ಉಪಾಧ್ಯಕ್ಷೆ ಕವಿತಾ, ಸದಸ್ಯರಾದ ಕೆ.ಇ.ಶಿವನಂಜಯ್ಯ, ಹೊನವಳ್ಳಿ ಸುಮಾ, ಡಿ.ಸಿ.ರವಿಕುಮಾರ್, ಸುರೇಶ್, ಸೋಮಕ್ಕ, ಕುಸುಮಾವತಿ, ಈಶ್ವರಿ, ನೋಡೆಲ್ ಅಧಿಕಾರಿ ಮುತ್ತಪ್ಪ ಸೇರಿದಂತೆ ವಿವಿಧ ಇಲಾಖಾಧಿ ಕಾರಿಗಳು ಉಪಸ್ಥಿತರಿದ್ದರು.